ಆ.1ರಂದು(ನಾಳೆ) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ: ಡಿಸಿ ದರ್ಶನ್ ಎಚ್.ವಿ.
July 31, 2026
ಮಂಗಳೂರು, ಜು.31: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಆ. 1ರ ಶನಿವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.