ಸಚಿವ ಸಂಪುಟ ವಿಸ್ತರಣೆ: ಇಂದು ಸಂಜೆ 4.05ಕ್ಕೆ ಪ್ರಮಾಣವಚನ- ನೂತನ ಸಚಿವರ ಪಟ್ಟಿ ಹೀಗಿದೆ….
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕ್ಷಣಗಣನೆ ಆರಂಭವಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭ ಇಂದು (ಸೋಮವಾರ) ಸಂಜೆ 4.05 ಗಂಟೆಗೆ ನಡೆಯಲಿದೆ ಎಂದು ಲೋಕಭವನ ಮೂಲಗಳು ತಿಳಿಸಿವೆ.
ಲೋಕಭವನದ ಗಾಜಿನ ಮನೆಯಲ್ಲಿ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಹಾಗೂ ಅತಿಥಿಗಳಿಗಾಗಿ ಹೊರಭಾಗದಲ್ಲಿ ಜರ್ಮನ್ ಟೆಂಟ್ ಅಳವಡಿಸಲಾಗಿದ್ದು, ಲೋಕೋಪಯೋಗಿ ಇಲಾಖೆಯು ಮೂರು ದಿನಗಳ ಹಿಂದೆಯೇ ಸಿದ್ಧತಾ ಕಾರ್ಯಗಳನ್ನು ಆರಂಭಿಸಿದೆ. ಭದ್ರತಾ ದೃಷ್ಟಿಯಿಂದ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಲೋಕಭವನ ಸುತ್ತಮುತ್ತ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
ಇದಕ್ಕೂ ಮುನ್ನ ನವದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಅಂತಿಮ ಹಂತದ ಚರ್ಚೆ ನಡೆಯಿತು.
ಸುಮಾರು 45 ನಿಮಿಷಗಳ ಕಾಲ ನಡೆದ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟ ಸೇರಲಿರುವ ನೂತನ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಒತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನೂತನ ಸಚಿವ ಪಟ್ಟಿ ಇಂತಿದೆ…
- ಪಿ.ಎಂ.ನರೇಂದ್ರಸ್ವಾಮಿ
- ಶಿವರಾಜ್ ತಂಗಡಗಿ
- ರುದ್ರಪ್ಪ ಲಮಾಣಿ
- ಕೆ.ಎಸ್.ಬಸವಂತಪ್ಪ
- ಬಿ.ನಾಗೇಂದ್ರ
- ಟಿ.ರಘುಮೂರ್ತಿ
- B. Z. ಜಮೀರ್ ಅಹಮದ್ ಖಾನ್
- ರಿಜ್ವಾನ್ ಅರ್ಷದ್
- ಸಂತೋಷ್ ಲಾಡ್
- ಮಧು ಬಂಗಾರಪ್ಪ
- ಪುಟ್ಟರಂಗಶೆಟ್ಟಿ
- ಮಂಕಾಳ ವೈದ್ಯ
- ಅಜಯ್ ಸಿಂಗ್
- ಎನ್. ಚಲುವರಾಯ ಸ್ವಾಮಿ
- ಕೆ.ಎಂ.ಶಿವಲಿಂಗೇಗೌಡ
- ಎಚ್.ಸಿ.ಬಾಲಕೃಷ್ಣ
- ಗಾಯತ್ರಿ ಶಾಂತೇಗೌಡ
- ಬಸವರಾಜ ರಾಯರೆಡ್ಡಿ
- ವಿಜಯಾನಂದ ಕಾಶಪ್ಪನವರ್
- ಲಕ್ಷ್ಮಣ ಸವದಿ





