ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಸಂತೋಷ್ ಎಸ್.ಡಿ.

ಉಡುಪಿ: ಕರ್ನಾಟಕ ಸರ್ಕಾರವು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಉಡುಪಿ ನಗರಸಭೆಯ ಪೌರಾಯುಕ್ತರ ಹುದ್ದೆಗೆ ಹೊಸ ಅಧಿಕಾರಿಯನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ.

ಆದೇಶದಂತೆ, ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ನಗರಸಭೆಯಲ್ಲಿ ಪೌರಾಯುಕ್ತರಾಗಿದ್ದ ಸಂತೋಷ್ ಎಸ್.ಡಿ. ಅವರನ್ನು ಉಡುಪಿ ನಗರಸಭೆಯ ಪೌರಾಯುಕ್ತರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿ ಆದೇಶಿಸಲಾಗಿದೆ.

ಉಡುಪಿ ನಗರಸಭೆಯ ಪೌರಾಯುಕ್ತರಾಗಿದ್ದ ಮಹಾಂತೇಶ್ ಹಂಗರಗಿ ಅವರನ್ನು ಮುಂದಿನ ಸ್ಥಳನಿಯುಕ್ತಿಗಾಗಿ ಸರ್ಕಾರದಲ್ಲಿ ವರದಿ ಮಾಡಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ.

ಸರ್ಕಾರದ ಈ ವರ್ಗಾವಣೆ ಆದೇಶವು ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಉಡುಪಿ ನಗರಸಭೆಯ ಆಡಳಿತದಲ್ಲಿ ಹೊಸ ಪೌರಾಯುಕ್ತರ ನೇತೃತ್ವದಲ್ಲಿ ಕಾರ್ಯಚಟುವಟಿಕೆಗಳು ಮುಂದುವರಿಯಲಿವೆ.

Leave a Reply

Your email address will not be published. Required fields are marked *

error: Content is protected !!