ಡಿವೈಎಸ್‌ಪಿ ಲಕ್ಷ್ಮಿ ಆತ್ಮಹತ್ಯೆ ಪ್ರಕರಣ: ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಡಿವೈಎಸ್‌ಪಿ ಲಕ್ಷ್ಮಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಲಕ್ಷ್ಮೀ ಅವರು, ನಿನ್ನೆ ಸ್ನೇಹಿತರೊಬ್ಬರ ಮನೆಯಲ್ಲಿ ಪಾರ್ಟಿ ಮಾಡಿದ ಬಳಿಕ ಪ್ರತ್ಯೇಕ ಕೋಣೆಯಲ್ಲಿ ತಂಗಿದ್ದು, ಈ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂಲತಃ ಕೋಲಾರದ ಮಾಲೂರಿನವರಾದ ಲಕ್ಷ್ಮಿ ಅವರು, ಕೋಣಕುಂಟೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು, 2014 ರ ಬ್ಯಾಚ್‌ನ ಅಧಿಕಾರಿಯಾದ ಅವರು, 2017 ಕ್ಕೆ ಕೆಲಸಕ್ಕೆ ಸೇರಿದ್ದರು. ಇದೀಗ ಪಾರ್ಟಿ ಮುಗಿಸಿದ ಬಳಿಕ ಇವರು ನೇಣಿಗೆ ಶರಣಾಗಿದ್ದು, ಅನ್ನಪೂರ್ಣೇಶ್ವರಿ ಪೊಲೀಸ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!