ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ- 6ಸಚಿವರಿಗೆ ಹಂಚಿಕೆಯಾಗದ ಖಾತೆ!

ಬೆಂಗಳೂರು: ಹಲವು ಸುತ್ತಿನ ಸಭೆಯ ಬಳಿಕ ಡಿಕೆ ಶಿವಕುಮಾರ್‌ ಸಂಪುಟದ ಮಂತ್ರಿಗಳಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಪಟ್ಟಿಯನ್ನು ಸಿದ್ದಪಡಿಸಿರುವ ಸಿಎಂ ಡಿಕೆ ಶಿವಕುಮಾರ್ ಅಧಿಕೃತ ಮುದ್ರೆಗಾಗಿ ಪಟ್ಟಿಯನ್ನು ಲೋಕಭವನಕ್ಕೆ ಕಳುಹಿಸಿದ್ದಾರೆ.

ಸಿದ್ದರಾಮಯ್ಯ ಸಂಪುಟದಲ್ಲಿ ಮುನಿಯಪ್ಪ ಅವರಿಗೆ ಆಹಾರ ಖಾತೆಯನ್ನು ನೀಡಲಾಗಿತ್ತು. ಆದರೆ ಈ ಬಾರಿ ಸಮಾಜ ಕಲ್ಯಾಣ ಸಚಿವಾಲಯ ನೀಡಲಾಗಿದೆ. ಮುನಿಯಪ್ಪ ಅವರು ಸಮಾಜಕಲ್ಯಾಣ ಖಾತೆ ಬೇಕೇಂದು ಪಟ್ಟು ಹಿಡಿದಿದ್ದರು. ಅದರಂತೆ ಈಗ ಆ ಖಾತೆಯನ್ನೇ ಹಂಚಿಕೆ ಮಾಡಲಾಗಿದೆ. ರಾಜ್ಯಪಾಲರ ಅಧಿಕೃತ ಮುದ್ರೆ ನಂತರ ಖಾತೆ ಹಂಚಿಕೆ ಘೋಷಣೆಯಾಗಲಿದೆ.

ಪ್ರಮಾಣವಚನ ಸ್ವೀಕರಿಸಿದ 19 ಮಂದಿ ಪೈಕಿ 13 ಮಂದಿಗೆ ಮಾತ್ರ ಈ ಗ ಖಾತೆ ಹಂಚಿಕೆ ಮಾಡಲಾಗಿದೆ. 6 ಮಂದಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ.

ಚಲುವರಾಯಸ್ವಾಮಿ – ಕೃಷಿ

ರಿಜ್ವಾನ್ ಅರ್ಷದ್‌ – ಆಹಾರ ಮತ್ತು ನಾಗರಿಕ ಸರಬರಾಜು

ಮುನಿಯಪ್ಪ – ಸಮಾಜ ಕಲ್ಯಾಣ

ಸಂತೋಷ್ ಲಾಡ್ – ಕಾರ್ಮಿಕ

ಬಸಂತಪ್ಪ- ಮೀನುಗಾರಿಕೆ

ಮಧು ಬಂಗಾರಪ್ಪ – ಪ್ರಾಥಮಿಕ ಶಿಕ್ಷಣ ಮತ್ತು ಸಾಕ್ಷರತಾ

ರಾಯರೆಡ್ಡಿ- ಉನ್ನತ ಶಿಕ್ಷಣ

ಜಮೀರ್ – ವಸತಿ ಖಾತೆ

ಲಕ್ಷ್ಮಣ ಸವದಿ – ಸಹಕಾರ ಇಲಾಖೆ

ಅಜಯ್ ಸಿಂಗ್ – ಅರಣ್ಯ ಇಲಾಖೆ

ಎಸ್‌ ಎಸ್‌ ಮಲ್ಲಿಕಾರ್ಜುನ – ಗಣಿ ಮತ್ತು ವಿಜ್ಞಾನ

ಬಾಲಕೃಷ್ಣ- ಸಣ್ಣ ನೀರಾವರಿ

Leave a Reply

Your email address will not be published. Required fields are marked *

error: Content is protected !!