ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ-ಮಾರಾಟ ನಿಷೇಧ

ಬೆಂಗಳೂರು, ಆ. 12: ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(ಎ) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ (ಮಾರಾಟ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿಗಳು -2011 ರ ನಿಯಮ 2.3.4ರ ಅಡಿಯಲ್ಲಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟು ಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಅಧಿಸೂಚನೆ ಹೊರಡಿಸಿದ ದಿನಾಂಕದಿಂದಲೇ ಈ ನಿಷೇಧ ಜಾರಿಗೆ ಬಂದಿದೆ.ಈ ನಿಷೇಧವು ತಂಬಾಕು ಅಥವಾ ನಿಕೋಟಿನ್ ಅಂಶವನ್ನು ಪ್ರತ್ಯೇಕವಾಗಿ ಪ್ಯಾಕ್ ಮಾಡಿ, ನಂತರ ಗ್ರಾಹಕರು ಸುಲಭವಾಗಿ ಮಿಶ್ರಣ ಮಾಡಿ ಬಳಸುವಂತೆ ಮಾರಾಟ ಮಾಡುವ ಯಾವುದೇ ಉತ್ಪನ್ನಗಳಿಗೂ ಅನ್ವಯವಾಗಲಿದೆ. ಪ್ಯಾಕೆಟ್, ಸ್ಯಾಚೆಟ್ ಅಥವಾ ಯಾವುದೇ ಹೆಸರಿನಲ್ಲಿ ತಂಬಾಕು ಮತ್ತು ನಿಕೋಟಿನ್ ಮಿಶ್ರಿತ ಗುಟ್ಕಾ ಹಾಗೂ ಪಾನ್ ಮಸಾಲಾಗಳನ್ನು ರಾಜ್ಯದಾದ್ಯಂತ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ.

Leave a Reply

Your email address will not be published. Required fields are marked *

error: Content is protected !!