ಉಡುಪಿ ಬ್ಲಾಕ್ ಯುವ ಕಾಂಗ್ರೆಸ್‌: ಆ.15ರಂದು 51ನೇ ವಾರ್ಷಿಕ ಸಮಾವೇಶ

Oplus_131072

ಉಡುಪಿ: ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ 51ನೇ ವಾರ್ಷಿಕ ಸಮಾವೇಶ ಆ.15ರಂದು ನಗರದ ಎಲ್ಐಸಿ ಡೈಮಂಡ್ ಜುಬಿಲಿ ಸಭಾಂಗಣದಲ್ಲಿ ನಡೆಯಲಿದೆ.

ಸಮಾವೇಶದ ಉದ್ಘಾಟನೆಯನ್ನು ಕಾಂಗ್ರೆಸ್ ಮುಖಂಡರಾದ ಪ್ರಸಾದ್ ಕಾಂಚನ್ ನೆರವೇರಿಸಲಿದ್ದು, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ, ವಿನಯ್ ಕುಮಾರ್ ಸೊರಕೆ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ಮುಖಂಡರಾದ ಗೋಪಾಲ ಪೂಜಾರಿ,ಜ್ಯೋತಿ ಹೆಬ್ಬಾರ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಭುಜಂಗ ಶೆಟ್ಟಿ, ದಿನಕರ್ ಹೆರೂರು, ಉದಯ ಕುಮಾರ್ ಮುನಿಯಾಲ್, ಹರಿಪ್ರಸಾದ್ ರೈ, ಕೃಷ್ಣ ಶೆಟ್ಟಿ ಬಜಗೋಳಿ,ರಮೇಶ ಕಾಂಚನ್, ರಾಘವೇಂದ್ರ ಶೆಟ್ಟಿ, ಕಿರಣ್ ಹೆಗ್ಡೆ, ಸೌರಭ ಬಲ್ಲಾಳ್, ಜಯಕುಮಾರ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ.

ಯುವ ಕಾಂಗ್ರೆಸ್‌ನ ವಿವಿಧ ಘಟಕಗಳ ಪದಾಧಿಕಾರಿಗಳು, ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ಮುಖಂಡರು ಮತ್ತು ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಯುವಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಯುವಕಾರ್ಯಕರ್ತರನ್ನು ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಹಾಗೂ ಮುಂಬರುವ ದಿನಗಳಲ್ಲಿ ಪಕ್ಷದ ಸಂಘಟನೆಗೆ ವೇಗ ನೀಡುವ ಕುರಿತು ಸಮಾವೇಶದಲ್ಲಿ ಚರ್ಚೆ ನಡೆಯಲಿದೆ.

ಇದೇ ಸಂದರ್ಭದಲ್ಲಿ BLA-2 ಸದಸ್ಯರಿಗೆ ಸನ್ಮಾನ ನಡೆಯಲಿದೆ. ಮಧ್ಯಾಹ್ನ ಯುವಕಾಂಗ್ರೆಸ್ ಪ್ರಾಯೋಜಕತ್ವದಲ್ಲಿ ಪ್ರಸಿದ್ಧ 15 ತಂಡಗಳಿಂದ “ಓಪನ್ ಡ್ಯಾನ್ಸ್ ಚಾಂಪಿಯನ್‌ಶಿಪ್‘’ ಸಮೂಹ ನೃತ್ಯ ಪ್ರದರ್ಶನ ನಡೆಯಲಿದೆ. ಸಂಜೆ 5ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ಜಿಲ್ಲೆಯ ಎಲ್ಲಾ ಯುವ ಕಾರ್ಯಕತರಿಗೆ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸಜ್ಜನ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!