ಪೊಲೀಸ್ ಕಾನ್ ಸ್ಟೇಬಲ್ ನಾಪತ್ತೆ
ಕೊಣಾಜೆ: ಕೆಎಸ್ ಆರ್ ಪಿ ಪೊಲೀಸ್ ಕಾನ್ ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ ಅಸೈಗೋಳಿಯ ಪೊಲೀಸ್ ವಸತಿ ಗೃಹದಲ್ಲಿ ನಡೆದಿದೆ.
ಅಸೈಗೋಳಿಯ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಏಳನೇ ಬೆಟಾಲಿಯನ್ನ ಕಾನ್ ಸ್ಟೇಬಲ್ ಅನಿಲ್ ಕುಮಾರ್ (29) ನಾಪತ್ತೆಯಾದವರು.
ಚಿಕ್ಕಮಗಳೂರು ಮೂಲದವರಾದ ಇವರು, ತಾಯಿ, ಪತ್ನಿಯೊಂದಿಗೆ ಅಸೈಗೋಳಿಯ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು. ಇದೀಗ ಇವರು, ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದು, ಕೌಟುಂಬಿಕ ಕರಣದಿಂದ ಬೇಸತ್ತು ನಾಪತ್ತೆಯಾಗಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.