ಡಿ.20 ರಿಂದ ಖಾಸಗಿ ಶಾಲೆಗಳು ಕ್ಲೋಸ್, ಆನ್ ಲೈನ್ ಕ್ಲಾಸ್ ಬಂದ್

ಬೆಂಗಳೂರು : ರಾಜ್ಯದಲ್ಲಿ ಸರ್ಕಾರಕ್ಕೆ ಒಂದರ ಹಿಂದೆ ಮತ್ತೊಂದರಂತೆ ತಲೆನೋವು ತರಿಸುವಂತಹ ಸಂಗತಿಗಳು ನಡೆಯುತ್ತಲೇ ಇದೆ. ಇದೀಗ ರಾಜ್ಯ ಸರಕಾರಕ್ಕೆ ಮತ್ತೊಂದು ಬಿಗ್ ಶಾಕ್ ಎಂಬಂತೆ ಖಾಸಗಿ ಶಾಲೆಗಳ ಒಕ್ಕೂಟ ಡಿ. 20 ರಿಂದ ಖಾಸಗಿ ಶಾಲೆಗಳನ್ನು ಮುಚ್ಚಿ, ಆನ್ ಲೈನ್ ಕ್ಲಾಸ್ ಬಂದ್ ಮಾಡಲು ನಿರ್ಧರಿಸಿದೆ ಎಂಬ ಸುದ್ದಿಯೊಂದು ವರದಿಯಾಗಿದೆ. 

ಖಾಸಗಿ ಶಾಲೆಗಳ ಬೇಡಿಕೆಗಳಿಗೆ ಸರ್ಕಾರದಿಂದ ಯಾವುದೇ ಸ್ಪಂದನೆ ವ್ಯಕ್ತವಾಗದ ಕಾರಣ ಅಂತಿಮವಾಗಿ ಸುಮಾರು 10 ಸಾವಿರ ಖಾಸಗಿ ಶಾಲೆಗಳನ್ನು ಮುಚ್ಚಿ ಪ್ರತಿಭಟನೆ ನಡೆಸಲು ಖಾಸಗಿ ಶಾಲಾ ಒಕ್ಕೂಟ ನಿರ್ಧರಿಸಿದೆ. 

ಈಗಾಗಲೇ ಜಿಲ್ಲಾ ಕೇಂದ್ರಗಳಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ಖಾಸಗಿ ಶಾಲಾ ಒಕ್ಕೂಟದ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ವೇಳೆ ಡಿ. 10 ರ ಒಳಗೆ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಗಡುವು ನೀಡಿದ್ದರು. ಇದೀಗ ಇವರ  ಬೇಡಿಕೆಗಳು ಈಡೇರದ ಕಾರಣ ಡಿ. 20 ರಿಂದ ಶಾಲೆಗಳನ್ನು ಮುಚ್ಚಿ ಆನ್ ಲೈನ್ ಕ್ಲಾಸ್ ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!