ವಂದೇ ಮಾತರಂ ಸಂಪೂರ್ಣ ಹಾಡುವುದಿಲ್ಲ ಹೇಳಿಕೆ- ಬಿ.ಕೆ ಹರಿಪ್ರಸಾದ್ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಲು ಯುವಮೋರ್ಚಾ ಮನವಿ
ಉಡುಪಿ: ಕೇಂದ್ರ ಸರ್ಕಾರ ಈಗಾಗಲೇ ಸಂಸತ್ತಿನಲ್ಲಿ ರಾಷ್ಟ್ರಗೀತೆಯಾಗಿ ವಂದೇ ಮಾತರಂ ಗೀತೆಯನ್ನು ಅನುಮೋದಿಸಿ ರಾಷ್ಟ್ರಪತಿಗಳ ವಂದೇ ಮಾತರಂ ಗೀತೆಯನ್ನು ಸಂಪೂರ್ಣ ಹಾಡುವುದಿಲ್ಲ ಅನ್ನುವ ಹೇಳಿಕೆಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿ ಕೆ ಹರಿಪ್ರಸಾದ್ ಮಾಧ್ಯಮದಲ್ಲಿ ಕೊಟ್ಟಿದ್ದು ಇದು ಸಂವಿಧಾನ ವಿರೋಧಿ ಹಾಗೂ ದೇಶ ವಿರೋಧಿ ಹೇಳಿಕೆಯಾಗಿದೆ ಇದರ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಯವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬಿ.ಕೆ ಹರಿಪ್ರಸಾದ್ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸುವಂತೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಜಿಲ್ಲಾ ಯುವಮೋರ್ಚಾ ಪ್ರಧಾನಕಾರ್ಯದರ್ಶಿ ಅಭಿರಾಜ್ ಸುವರ್ಣ,ಪ್ರದೀಪ್ ಕುಂದರ್,ಜಿಲ್ಲಾ ಉಪಾಧ್ಯಕ್ಷರಾದ ಗುರುರಾಜ್ ಮಾಡ,ಪ್ರಥ್ವಿರಾಜ್ ಮಣಿಪಾಲ್ ಸಚಿನ್ ಪಿತ್ರೋಡಿ ಮಂಡಲ ಯುವಮೋರ್ಚಾ ಅಧ್ಯಕ್ಷರುಗಳಾದ ಶ್ರೀ ವತ್ಸ,ಸೋನು ಪಾಂಗಳ,ಸುಶಾಂತ್ ಪೂಜಾರಿ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು




