ಉಡುಪಿ: ಸೆ.4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಫ್ಯಾನ್ಸಿ ಶೋ ಸ್ಪರ್ಧೆ

ಉಡುಪಿ, ಆ.31: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಜೋಡುಕಟ್ಟೆಯ “ಸ್ಮಾರ್ಟ್ ಬಜಾರ್ ಉಡುಪಿ ವತಿಯಿಂದ ಆಯೋಜಿಸಲಾಗಿರುವ 16ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ–2026ರ ಫ್ಯಾನ್ಸಿ ಶೋ ಸ್ಪರ್ಧೆ ಸೆಪ್ಟೆಂಬರ್ 4ರಂದು ನಡೆಯಲಿದೆ.

ಸ್ಪರ್ಧೆಯು ಸೆಪ್ಟೆಂಬರ್ 4ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆಯಿಂದ ಉಡುಪಿಯ ರಿಲಯನ್ಸ್ ಸ್ಮಾರ್ಟ್ ಬಜಾರ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವು ಹಳೆಯ ಡಾ. ಟಿಎಂಎ ಪೈ ಆಸ್ಪತ್ರೆ ಎದುರಿನ ರಿಲಯನ್ಸ್ ಸ್ಮಾರ್ಟ್ ಬಜಾರ್‌ನಲ್ಲಿ ಆಯೋಜಿಸಲಾಗಿದೆ.

ಸ್ಪರ್ಧೆಯನ್ನು ಮೂರು ವಿಭಾಗಗಳಾಗಿ ಆಯೋಜಿಸಲಾಗಿದ್ದು, 0 ರಿಂದ 3 ವರ್ಷ, 3 ರಿಂದ 6 ವರ್ಷ ಹಾಗೂ 6 ರಿಂದ 10 ವರ್ಷದೊಳಗಿನ ಮಕ್ಕಳಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಸ್ಪರ್ಧೆಯಲ್ಲಿ ವಿಜೇತರಾಗುವ ಮಕ್ಕಳಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಅಲ್ಲದೆ, ಭಾಗವಹಿಸುವ ಪ್ರತಿಯೊಬ್ಬ ಮಕ್ಕಳಿಗೂ ಪೂರಕ ಉಡುಗೊರೆ ಹಾಗೂ ಭಾಗವಹಿಸಿದ ಪ್ರಮಾಣಪತ್ರ ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಪೋಷಕರು ತಮ್ಮ ಮಕ್ಕಳ ಹೆಸರು, ವಯಸ್ಸು ಹಾಗೂ ಪೋಷಕರ ವಿವರಗಳನ್ನು ನೀಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿಗೆ ಕೊನೆಯ ದಿನಾಂಕ ಸೆಪ್ಟೆಂಬರ್ 3 ಆಗಿದೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗಾಗಿ ಸಂಪರ್ಕಿಸಿ:
📞 96631 72359
📞 63605 18193

Leave a Reply

Your email address will not be published. Required fields are marked *

error: Content is protected !!