SIR ಪ್ರಕ್ರಿಯೆಗೆ ವಾಸ್ತವ್ಯ ದೃಢೀಕರಣ ಪತ್ರದ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಮನವಿ

ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನೈಜ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ಪಡೆಯುವಲ್ಲಿ ಉಂಟಾಗುತ್ತಿರುವ ಸಮಸ್ಯೆಯನ್ನು ಬಗೆಹರಿಸುವ ಕುರಿತು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅವರಿಗೆ ಮನವಿ ಸಲ್ಲಿಸಲಾಯಿತು.

ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ ಮತದಾರರ ವಿವರಗಳಲ್ಲಿನ ವ್ಯತ್ಯಾಸ ಸೇರಿದಂತೆ ಹಲವಾರು ಕಾರಣಗಳಿಂದಾಗಿ ಮತದಾರರಿಗೆ ನೋಟಿಸ್ ಬಂದಿರುತ್ತದೆ. ನೋಟಿಸ್‌ನಲ್ಲಿ ಸೂಚಿಸಿದ ದಾಖಲೆಗಳು ಮತದಾರರಲ್ಲಿ ಇಲ್ಲದಿದ್ದಾಗ ಚುನಾವಣಾ ಆಯೋಗವು ಮಾನ್ಯ ಮಾಡುವ ವಾಸ್ತವ್ಯ ದೃಢೀಕರಣ ಪತ್ರಕ್ಕಾಗಿ ಸ್ಥಳೀಯ ಕಂದಾಯ  ಅಧಿಕಾರಿಗಳ ಬಳಿ ಹೋದಾಗ ವಿವಿಧ ಕಾರಣಗಳನ್ನು ನೀಡಿ ಸತಾಯಿಸಿದ ಬಹಳಷ್ಟು ನಿದರ್ಶನಗಳಿದ್ದು ಬಾಡಿಗೆ ಮನೆಗಳಲ್ಲಿ ವಾಸಿಸುವರು ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ವಾಸಿಸುತ್ತಿದ್ದರೂ  ಸೂಕ್ತ ದಾಖಲೆಗಳನ್ನು ಹೊಂದಿರದವರು ಹಳೆಯ ದಾಖಲೆಗಳಲ್ಲಿ ವಿಳಾಸದ ವ್ಯತ್ಯಾಸ ಹೊಂದಿರುವ ಮತದಾರರು ಅನಗತ್ಯವಾಗಿ  ಪ್ರತಿನಿತ್ಯ ಕಂದಾಯ ಕಛೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 

ಮತದಾನದ ಸಾಂವಿಧಾನಿಕ ಹಕ್ಕಿನಿಂದ ಯಾರೊಬ್ಬರೂ ವಂಚಿತರಾಗದಂತೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗದಂತೆ SIR ಗೆ ಸಂಬಂಧಿಸಿದಂತೆ ಅರ್ಹ ನಾಗರಿಕರು ವಾಸ್ತವ್ಯ ದೃಢೀಕರಣ ಪತ್ರಕ್ಕೆ ಅರ್ಜಿ ಸಲ್ಲಿಸಿದ ಕೂಡಲೇ ನಿಯಮಾನುಸಾರ ಅದನ್ನು  ನೀಡಲು ಸೂಕ್ತ ನಿರ್ದೇಶನ ನೀಡುವಂತೆ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಮಹಾಬಲ ಕುಂದರ್, ಕೃಷ್ಣ ಹೆಬ್ಬಾರ್, ಹರಿಪ್ರಸಾದ್ ರೈ, ಗಣೇಶ್ ನೆರ್ಗಿ, ಸತೀಶ್ ಕೊಡವೂರು, ಸುಕೇಶ್ ಕುಂದರ್, ಸತೀಶ್ ಕುಮಾರ್ ಮಂಚಿ,  ಶಶಿರಾಜ್ ಕುಂದರ್, ಲಕ್ಷ್ಮಣ್ ಪೂಜಾರಿ, ಮಮತಾ ಶೆಟ್ಟಿ, ಆಶಾ ಚಂದ್ರಶೇಖರ್, ಸಂಧ್ಯಾ ತಿಲಕ್‌ರಾಜ್, ಸದಾನಂದ್ ಕುಲಾಲ್, ಆರೀಫ್, ಬೋನಿಫಾಸ್, ಭರತ್ ಕುಮಾರ್, ಶಕುಂತಲಾ, ದಯಾನಂದ್ ಹಾಗೂ ಸಂಜಯ್ ಆಚಾರ್ಯ ಅವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!