ಗಣೇಶೋತ್ಸವ: ಉಡುಪಿ ಜಿಲ್ಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ

ಉಡುಪಿ: ಶಾಂತಿಯುತ ಗಣೇಶೋತ್ಸವ ಆಚರಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಪಾಲನೆ ಕಾಪಾಡುವ ಉದ್ದೇಶದಿಂದ ಸೆ.14, 16 ಮತ್ತು 18ರಂದು ವಿವಿಧ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.

ಸೆ.14ರಂದು ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ. ಸೆ.16ರಂದು ಮಧ್ಯಾಹ್ನ 2ರಿಂದ ರಾತ್ರಿ 12ರವರೆಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸೆ.18ರಂದು ಮಧ್ಯಾಹ್ನ 2ರಿಂದ ರಾತ್ರಿ 12ರವರೆಗೆ ಗಣೇಶ ಮೂರ್ತಿ ವಿಸರ್ಜನೆ ನಡೆಯುವ ವಿವಿಧ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಗಂಗೊಳ್ಳಿ, ಕುಂದಾಪುರ ನಗರ ಹಾಗೂ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ದಿಷ್ಟ ಗ್ರಾಮಗಳಲ್ಲಿಯೂ ಈ ನಿಷೇಧ ಜಾರಿಯಲ್ಲಿರಲಿದೆ.

Leave a Reply

Your email address will not be published. Required fields are marked *

error: Content is protected !!