ಗ್ರಾ.ಪಂ. ಚುನಾವಣೆ – ಸಂತೆ, ಜಾತ್ರೆ ನಿಷೇಧ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ, ಡಿ.18: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬoಧಿಸಿದoತೆ
ಡಿಸೆಂಬರ್ 22 ಮತ್ತು ಡಿಸೆಂಬರ್ 27 ರಂದು ಚುನಾವಣೆ ನಡೆಯಲಿದ್ದು, ಮತದಾನದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮತ್ತು ಸಾರ್ವಜನಿಕರು ಮತ ಹಾಕಲು ಅನುಕೂಲವಾಗುವಂತೆ ಜಿಲ್ಲೆಯ ಈ
ಕೆಳಕಂಡ ತಾಲೂಕಿನ ಚುನಾವಣೆ ನಡೆಯಲಿರುವ ಗ್ರಾಮಪಂಚಾಯತ್‌ನ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಅಡಿಯಲ್ಲಿ ಚುನಾವಣೆ ನಡೆಯುವ ದಿನಗಳಂದು ಸಂತೆ
ಮತ್ತು ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

ಡಿಸೆಂಬರ್ 22 ರ ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಬೈಂದೂರು ತಾಲೂಕು ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಪ್ಪುಂದ ಗ್ರಾಮದ ವಾರದ ಸಂತೆ, ಬ್ರಹ್ಮಾವರ ತಾಲೂಕು ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುದ್ದೂರಿನಲ್ಲಿ ನಡೆಯುವ ಸಂತೆ, ಉಪ್ಪೂರು ಗ್ರಾಮ ಪಂಚಾಯತ್‌ನ ಕೊಳಲಗಿರಿ ಪ್ರದೇಶದಲ್ಲಿ
ನಡೆಯುವ ಸಂತೆ ಹಾಗೂ ಹೆಬ್ರಿ ತಾಲೂಕು ಕುಚ್ಚೂರು ಗ್ರಾಮ ಪಂಚಾಯತ್‌ನ ಬೇಳಂಜೆ ಗ್ರಾಮದಲ್ಲಿ ನಡೆಯುವ ಮಾರಿ ಜಾತ್ರೆಯನ್ನು ನಿಷೇಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!