ಸೆ.17: ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಕಿಶನ್ ಹೆಗ್ಡೆ ಅಧಿಕಾರ ಸ್ವೀಕಾರ ಸಮಾರಂಭ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೊಳ್ಕೆಬೈಲು ಕಿಶನ್ ಹೆಗ್ಡೆ ಅವರು ಸೆ.17 (ನಾಳೆ) ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಅಧಿಕಾರ ಸ್ವೀಕಾರ ಸಮಾರಂಭವು ಗುರುವಾರ ಬೆಳಿಗ್ಗೆ 10 ಗಂಟೆಗೆ ಉಡುಪಿಯ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದೆ.

ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಐವನ್ ಡಿ’ಸೋಜಾ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ಹಾಗೂ ಸುಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಾಜು ಪೂಜಾರಿ ಸೇರಿದಂತೆ ಕೆಪಿಸಿಸಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮುಂಚೂಣಿ ಘಟಕಗಳ ಜಿಲ್ಲಾ ಅಧ್ಯಕ್ಷರು ಉಪಸ್ಥಿತರಿರುವರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!