ಡಿ.20: ಸುರತ್ಕಲ್ ಬಂಟರ ಸಂಘದ ವಾರ್ಷಿಕ ಸಮಾವೇಶ, ಪ್ರತಿಭಾ ಪುರಸ್ಕಾರ
ಸುರತ್ಕಲ್: ಬಂಟರ ಸಂಘ(ರಿ) ಸುರತ್ಕಲ್ ಇದರ ವಾರ್ಷಿಕ ಸಮಾವೇಶ, ಅಭಿನಂದನೆ, ಸಹಾಯಹಸ್ತ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವು ಡಿಸೆಂಬರ್ 20 ರಂದು ಭಾನುವಾರ ಸಂಜೆ 5 ಗಂಟೆಗೆ ಬಂಟರ ಭವನ ಸುರತ್ಕಲ್ ಇಲ್ಲಿ ನಡೆಯಲಿದೆ. ಸಮಾರಂಭದ ಉದ್ಘಾಟನೆಯನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದಾರೆ.ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ ವಹಿಸಲಿದ್ದಾರೆ. ಸಮಾರಂಭದಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಉಮಾನಾಥ ಎ.ಕೋಟ್ಯಾನ್, ಮುಂಬಯಿ ಭವಾನಿ ಶಿಪ್ಪಿಂಗ್‌ನ ಸಿಎಂಡಿ ಕುಸುಮೋದರ ಡಿ ಶೆಟ್ಟಿ , ಮಂಗಳೂರು ಸಣ್ಣ ನೀರಾವರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಗೋಕುಲ್ ದಾಸ್, ಸುರತ್ಕಲ್ ವಿಜಯ ಮೆಡಿಕಲ್ಸ್‌ನ ವೂಲಕ ದಯಾನಂದ ಡಿ.ಶೆಟ್ಟಿ, ಮುಂಬಯಿ ಬಂಟರ ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರ್ ಮೋಹನ್ ರೈ ಮುಂಬೈ, ಸಂಸ್ಕಾರ ಭಾರತೀಯ ಅಧ್ಯಕ್ಷ ಪುರುಷೋತ್ತಮ ಕೆ.ಭಂಡಾರಿ ಅಡ್ಯಾರ್ ಮೊದಲಾದವರು ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಶೈಕ್ಷಣಿಕ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಗುವುದು. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಭಿನ್ನ ಸಾಮರ್ಥ್ಯ ಹಾಗೂ ವಿಕಲಚೇತನರಿಗೆ ಸಹಾಯಹಸ್ತ ನೀಡಲಾಗುವುದು.ಸಮಾರಂಭದಲ್ಲಿ ೨೦೨೦ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪರಸ್ಕೃತರಾದ ಕುಸುಮೋದರ ಡಿ ಶೆಟ್ಟಿ ಚೆಲ್ಲಡ್ಕ, ಕಂಬಳ ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತರಾದ ಖಂಡಿಗೆ ಗೋಪಾಲಕೃಷ್ಣ ಸರ್ವೋತ್ತಮ ಪ್ರಭು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪದ್ಮನಾಭ ಕೆ.ಸುರತ್ಕಲ್, ಯೋಗೀಶ್ ಕಾಂಚನ್ ಬೈಕಂಪಾಡಿ ಅವರನ್ನು ಸನ್ಮಾನನಿಸಲಾಗುವುದು. ಡಾ.ಸುರೇಶ್ ಸುರತ್ಕಲ್, ಡಾ.ಜಿ.ಕ್ಲಿಪರ್ಡ್ ಕಾನ ಅವರನ್ನು ಗೌರವಿಸಲಾಗುವುದು. ಮಹಾಸಭೆಅಂದು ಮಧ್ಯಾಹ್ನ 2.30ಕ್ಕೆ ಬಂಟರ ಭವನದಲ್ಲಿ ಸುರತ್ಕಲ್ ಬಂಟರ ಸಂಘದ ಮಹಾಸಭೆ ನಡೆಯಲಿದೆ. ಸಂಜೆ 4 ಗಂಟೆಗೆ ಗ್ರಾಮವಾರು ನೃತ್ಯ ಸ್ಪರ್ಧೆ ನಡೆಯಲಿದೆ ಬಳಿಕ 5 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೋಕಯ್ಯ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. |