ಉಡುಪಿ ಗೃಹ ನಿರ್ಮಾಣ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಉಡುಪಿ: ಉಡುಪಿ ಗೃಹ ನಿರ್ಮಾಣ ಸಹಕಾರಿ ಸಂಘದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಭಾಸ್ಕರ ಬಿ. ಕಾಮತ್ ಅವರ ಅಧ್ಯಕ್ಷತೆಯಲ್ಲಿ ಬಡಗುಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ನಡೆಯಿತು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಅಶೋಕ್ ಭಟ್ ವಾರ್ಷಿಕ ವರದಿ ಮಂಡಿಸಿದರು. ಸಭೆಯಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ಸನ್ಮಾನಿಸಲಾಯಿತು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ಸಂಘದ ನಿರ್ದೇಶಕ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಉಪಾಧ್ಯಕ್ಷ ಎಲ್.ಉಮಾನಾಥ್, ನಿರ್ದೇಶಕರಾದ ದಿನೇಶ್ ಕಿಣಿ ಅಲೆವೂರು, ಇಂದು ರಮಾನಂದ ಭಟ್, ರಾಧಾಕೃಷ್ಣ ಎ. ಶೆಣೈ, ದೇವದಾಸ್ ಯು., ಸಂಜೀವ ಕಾಂಚನ್, ಸುಜಾತ ಎಸ್. ಪ್ರಭು, ರಂಜನಾ ಎಸ್. ಶೆಟ್ಟಿ, ಗೋಪಾಲ ನಾಯ್ಕ್ ಹಾಗೂ ದಾಮೋದರ ಎಂ. ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!