ಮಲ್ಪೆ: ಆಂಧ್ರಪ್ರದೇಶ ಮೂಲದ ವ್ಯಕ್ತಿಯ ಹತ್ಯೆ

ಮಲ್ಪೆ, ಸೆ.29: ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ಮಲ್ಪೆಯಲ್ಲಿ ನಡೆದಿದೆ. ಮೃತರನ್ನು ಆಂಧ್ರಪ್ರದೇಶದ ಪರಮೇಶ್ ಎಂದು ಗುರುತಿಸಲಾಗಿದೆ. ಗುಜರಿ ಹೆಕ್ಕುವ ಕೆಲಸ ಮಾಡುತ್ತಿದ್ದ ಪರಮೇಶ್, ತಾನು ಪ್ರತಿದಿನ ಮಲಗುವ ಜಾಗದಲ್ಲಿಯೇ ಕೊಲೆಯಾಗಿರುವುದು ಕಂಡುಬಂದಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!