ಉಡುಪಿ: ನಗರ ಸಭಾ ವ್ಯಾಪ್ತಿಯ ದಾರಿ ದೀಪ ದುರಸ್ತಿಗೆ ಜಿಲ್ಲಾಧಿಕಾರಿಗೆ ಮನವಿ
ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅವರಿಗೆ ಉಡುಪಿ ನಗರಸಭೆ ವ್ಯಾಪ್ತಿಯ ದಾರಿದೀಪ ಹಾಗೂ ಹೈಮಾಸ್ಟ್ ಲೈಟ್‌ಗಳು ಹದಗೆಟ್ಟು ಹೋಗಿರುವ ಕುರಿತು ಈ ಸಮಸ್ಯೆಯನ್ನು ಬಗೆಹರಿಸುವಂತೆ ಸಮಸ್ತ ನಾಗರಿಕರ ಪರವಾಗಿ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಮೀನಾಕ್ಷಿ ಮಾಧವ ಬನ್ನಂಜೆ, ಗಣೇಶ್ ನೆರ್ಗಿ, ಸುಕೇಶ್ ಕುಂದರ್, ಸತೀಶ್ ಕುಮಾರ್ ಮಂಚಿ, ಸಂಧ್ಯಾ ತಿಲಕ್‌ರಾಜ್, ಭರತ್ ಕುಮಾರ್, ರಮೇಶ್ ಪಾಲ್ ಹಾಗೂ ಸಂಜಯ್ ಆಚಾರ್ಯ ಅವರು ಉಪಸ್ಥಿತರಿದ್ದರು.





