ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀದುರ್ಗಾಂಬ ಬಸ್ ಕಳವು

ಉಡುಪಿ: ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಶ್ರೀದುರ್ಗಾಂಬ ಬಸ್‌ವೊಂದು ನಾಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಕಟ್‌ಬೆಲ್ತೂರು, ಕುಂದಾಪುರ ನಿವಾಸಿ ಕೃಷ್ಣ (51) ಅವರು KA-20-AD-1931 ನೋಂದಣಿ ಸಂಖ್ಯೆಯ ಶ್ರೀದುರ್ಗಾಂಬ ಬಸ್‌ನ ನಿರ್ವಾಹಕರಾಗಿದ್ದು, ರಾಯಿನ್ ಉಚ್ಚಿಲ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೆಪ್ಟೆಂಬರ್ 28ರಂದು ರಾತ್ರಿ ಸುಮಾರು 9.48ಕ್ಕೆ ಬಸ್‌ನ್ನು ಹನುಮಾನ್ ಪೆಟ್ರೋಲ್ ಬಂಕ್‌ನ ಹಿಂಭಾಗದಲ್ಲಿ ನಿಲ್ಲಿಸಲಾಗಿತ್ತು. ಬಳಿಕ ರಾತ್ರಿ 10 ಗಂಟೆ ಸುಮಾರಿಗೆ ಕೃಷ್ಣ ಅವರು ಚಾಲಕ ರಾಯಿನ್ ಅವರೊಂದಿಗೆ ಸ್ಕೂಟರ್‌ನಲ್ಲಿ ಅಲ್ಲಿಂದ ತೆರಳಿದ್ದರು.

ಸೆಪ್ಟೆಂಬರ್ 29ರಂದು ಬೆಳಗ್ಗೆ ಎಂದಿನಂತೆ ಹನುಮಾನ್ ಪೆಟ್ರೋಲ್ ಬಂಕ್‌ಗೆ ಆಗಮಿಸಿದಾಗ ನಿಲ್ಲಿಸಿದ್ದ ಬಸ್ ಸ್ಥಳದಲ್ಲಿ ಕಾಣಿಸಿರಲಿಲ್ಲ. ಪರಿಶೀಲಿಸಿದಾಗ, ಅಪರಿಚಿತ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಬಂದು ನಿಲ್ಲಿಸಿದ್ದ ಬಸ್‌ನ್ನು ಕಳವು ಮಾಡಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಕೃಷ್ಣ ಅವರು ನೀಡಿದ ದೂರಿನ ಆಧಾರದ ಮೇಲೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ಇಂದು ಬೆಳಿಗ್ಗೆ ಬೆಳ್ಮಣ್ ಸಮೀಪ ಪತ್ತೆ ಆಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!