ಅ.11ರಂದು “ಸಂಗೊಳ್ಳಿ ರಾಯಣ್ಣ ಪುರಸ್ಕಾರ ಸಮಾರಂಭ”

ರಂಗಕರ್ಮಿ ರವಿರಾಜ್ ಎಚ್.ಪಿ. ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನ

ಉಡುಪಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಂಗೊಳ್ಳಿ ರಾಯಣ್ಣ ಪುರಸ್ಕಾರ ಸಮಾರಂಭ ಅ. 11ರಂದು ಸಂಜೆ 4.30ಕ್ಕೆ ಕುಂಜಿಬೆಟ್ಟಿನ ಯಕ್ಷಗಾನ ಕಲಾರಂಗದ ಐವೈಸಿ ಹವಾನಿಯಂತ್ರಿತ ಸಭಾಂಗಣದಲ್ಲಿ ನಡೆಯಲಿದೆ.

ಈ ಬಾರಿ ಖ್ಯಾತ ರಂಗಕರ್ಮಿ ರವಿರಾಜ್ ಎಚ್.ಪಿ. ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಬಳಗದ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಜೆ 4.30ರಿಂದ 5ರವರೆಗೆ ಖ್ಯಾತ ಗಾಯಕರಾದ ರಾಜೇಶ್ ಶಾನ್‌ಭೋಗ್ ಹಾಗೂ ಬಾರಕೂರು (ಪಿ. ಕಾಳಿಂಗರಾವ್ ಅವರ ಮೊಮ್ಮಗ) ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಉಡುಪಿ ಅಪರ ಜಿಲ್ಲಾಧಿಕಾರಿ ಅಭೀದ್ ಗದ್ಯಾಳ್ ಸಮಾರಂಭ ಉದ್ಘಾಟಿಸಲಿದ್ದು, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಕರ್ನಾಟಕ ಸಂಸ್ಥಾಪಕ ಸುರೇಶ್ ಗೋಕಾಕ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಮಾಜಿ ಸಚಿವ ಹಾಗೂ ಉದ್ಯಮಿ ಪ್ರಮೋದ್ ಮಧ್ವರಾಜ್ ಅವರು ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕ್ಷೀರಾಭಿಷೇಕ ನೆರವೇರಿಸಲಿದ್ದು, ಗಾಂಧಿ ಆಸ್ಪತ್ರೆ ಉಡುಪಿ ಸಂಸ್ಥಾಪಕ ಡಾ. ಹರಿಶ್ಚಂದ್ರ ಅವರು ರಾಯಣ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಡುಪಿ ಜಿಲ್ಲಾ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಸ್ಥಾಪಕ ವಿಶ್ವನಾಥ ಶೆಣೈ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ಕುಮಾರ್ ಪ್ರಸಾದ್ ಹಾಗೂ ಉಪಾಧ್ಯಕ್ಷ ಲಕ್ಷ್ಮಣ್ ಕೋಲ್ಕಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕುಮಾರ್ ಪ್ರಸಾದ್, ಲಕ್ಷ್ಮಣ್ ಕೋಲ್ಕಾರ್, ಬಸವರಾಜ್ ಐಹೊಳೆ ಹಾಗೂ ಕಾಳಪ್ಪ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!