ಉಡುಪಿ: ಬೈಲಕೆರೆ ನಿವಾಸಿ ಆತ್ಮಹತ್ಯೆಗೆ ಶರಣು
ಉಡುಪಿ, ಅ. 8: ವಿದ್ಯೋದಯ ಶಾಲೆ ಸಮೀಪದ ಬೈಲಕೆರೆ ಗೋಕುಲ್ ಧಾಮ್ ಖಾಸಗಿ ವಸತಿಗೃಹದ ಮೊದಲನೇ ಮಹಡಿಯಲ್ಲಿ 71 ವರ್ಷದ ವ್ಯಕ್ತಿಯೊಬ್ಬರು ಫ್ಯಾನಿಗೆ ಬಟ್ಟೆ ಕಟ್ಟಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ನಡೆದಿದೆ.
ಘಟನೆ ಗಮನಿಸಿದ ಅವರ ಪತ್ನಿ ಮತ್ತು ಮಗಳು ತಕ್ಷಣ ಅವರನ್ನು ಕುಣಿಕೆಯಿಂದ ಕೆಳಗಿಳಿಸಿದ್ದಾರೆ. ವಿಷಯ ತಿಳಿದು ಸ್ಥಳೀಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಕೂಡಲೇ ಸ್ಥಳಕ್ಕೆ ಧಾವಿಸಿ, ಅಸ್ವಸ್ಥ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಸಾಗುವ ಹಾದಿಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಮೃತರನ್ನು ಶ್ರೀಧರ್ ಕೆ. ಐತಾಳ್ (71) ಎಂದು ಗುರುತಿಸಲಾಗಿದೆ. ಅವರು ಈ ಹಿಂದೆ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.





