ಉಡುಪಿ ಜಿಲ್ಲೆಯ ತಾಲೂಕು ಪಂಚಾಯಿತಿ ಮೀಸಲಾತಿ ನಿಯಮ ತಿದ್ದುಪಡಿಗೆ ಕರಡು ಅಧಿಸೂಚನೆ ಪ್ರಕಟ
Oplus_131072
ಅ.19ರ ಸಂಜೆ 5 ಗಂಟೆಯೊಳಗೆ ಆಕ್ಷೇಪಣೆ, ಸಲಹೆ ಸಲ್ಲಿಸಲು ಅವಕಾಶ
ಬೆಂಗಳೂರು, ಅ.9(ಉಡುಪಿ ಟೈಮ್ಸ್ ವರದಿ): ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ, 1993ರ ಅಡಿಯಲ್ಲಿ ಉಡುಪಿ ಜಿಲ್ಲೆಯ ತಾಲೂಕು ಪಂಚಾಯಿತಿ ಸ್ಥಾನಗಳ ಮೀಸಲಾತಿ ನಿಗದಿಪಡಿಸುವ ಸಂಬಂಧ ಕರ್ನಾಟಕ ಸರ್ಕಾರವು ಕರಡು ಅಧಿಸೂಚನೆ ಪ್ರಕಟಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಕ್ಟೋಬರ್ 9, 2026ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಈ ಕರಡು ಅಧಿಸೂಚನೆಯನ್ನು ಪ್ರಕಟಿಸಿದ್ದು, ಸಾರ್ವಜನಿಕರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಆಹ್ವಾನಿಸಿದೆ.

ಕರಡು ಅಧಿಸೂಚನೆಯ ಪ್ರಕಾರ, ಅಧಿಸೂಚನೆ ಪ್ರಕಟವಾದ ದಿನಾಂಕದಿಂದ 10 ದಿನಗಳೊಳಗೆ, ಅಂದರೆ 2026ರ ಅಕ್ಟೋಬರ್ 19ರ ಸೋಮವಾರ ಸಂಜೆ 5 ಗಂಟೆಯೊಳಗೆ, ಸಾರ್ವಜನಿಕರು ತಮ್ಮ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಬಹುದಾಗಿದೆ.
ಆಕ್ಷೇಪಣೆ ಹಾಗೂ ಸಲಹೆಗಳನ್ನು ಬೆಂಗಳೂರಿನ ಬಹುಮಹಡಿ ಕಟ್ಟಡದಲ್ಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕಾಗಿದೆ. ವಿಳಾಸ: ಸರ್ಕಾರದ ಕಾರ್ಯದರ್ಶಿ (ಪಂಚಾಯತ್ ರಾಜ್), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬಹುಮಹಡಿ ಕಟ್ಟಡ, 3ನೇ ಹಂತ, 3ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು–560001.

ಸಾರ್ವಜನಿಕರಿಂದ ಸ್ವೀಕೃತವಾಗುವ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪರಿಶೀಲಿಸಿ, ನಿಯಮಾನುಸಾರ ಸೂಕ್ತ ನಿರ್ಧಾರ ಕೈಗೊಳ್ಳಲು ಸರ್ಕಾರ ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಕರಡು ಅಧಿಸೂಚನೆಯಿಂದ ಪ್ರಭಾವಿತರಾಗುವವರು ನಿಗದಿತ ಗಡುವಿನೊಳಗೆ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.





