ಉಡುಪಿ ಜಿಲ್ಲಾ ಪಂಚಾಯತ್ ಸ್ಥಾನಗಳ ಮೀಸಲಾತಿ ನಿಗದಿಗೆ ಕರಡು ಅಧಿಸೂಚನೆ ಪ್ರಕಟ
ಬೆಂಗಳೂರು, ಅ.9(ಉಡುಪಿ ಟೈಮ್ಸ್ ವರದಿ): ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ, 1993ರ ಅಡಿಯಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸ್ಥಾನಗಳ ಮೀಸಲಾತಿ ನಿಗದಿಪಡಿಸುವ ಸಂಬಂಧ ಕರ್ನಾಟಕ ಸರ್ಕಾರವು ಕರಡು ಅಧಿಸೂಚನೆ ಪ್ರಕಟಿಸಿದೆ.
ಅಧಿಸೂಚನೆಯ ಪ್ರಕಾರ, ಅಧಿಸೂಚನೆ ಪ್ರಕಟವಾದ ದಿನಾಂಕದಿಂದ 10 ದಿನಗಳೊಳಗೆ, ಅಂದರೆ 2026ರ ಅಕ್ಟೋಬರ್ 19ರ ಸೋಮವಾರ ಸಂಜೆ 5 ಗಂಟೆಯೊಳಗೆ, ಸಾರ್ವಜನಿಕರು ತಮ್ಮ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಬಹುದಾಗಿದೆ.





