ಮಂಡ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಎ. ತಿಮ್ಮಯ್ಯ ನಿಧನ
ಉಡುಪಿ: ಕೊಡಗು ಮೂಲದ ಹಿರಿಯ ಪೊಲೀಸ್ ಅಧಿಕಾರಿ ಚೆಯ್ಯಂಡ ಅರುಣ್ ತಿಮ್ಮಯ್ಯ ನಿಧನ
ಕೊಡಗು ಜಿಲ್ಲೆಯ ಬಲಮುರಿ ಗ್ರಾಮದವರಾದ ಮಂಡ್ಯ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್ಪಿ) ಚೆಯ್ಯಂಡ ಅರುಣ್ ತಿಮ್ಮಯ್ಯ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರ ನಿಧನದ ಸುದ್ದಿ ದುಃಖ ತಂದಿದೆ. ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಚಿತಾಗಾರದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.
ಉಡುಪಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದ ಇವರು ಹಲವು ಅಪರಾಧ ಪ್ರಕರಣವನ್ನು ಭೇಧಿಸಿ ಉತ್ತಮ ಅಧಿಕಾರಿಯಾಗಿ ಹೆಸರು ಗಳಿಸಿದ್ದರು.





