ಉಡುಪಿ: ನಿವೃತ್ತ ಎಎಸ್ಐ ವಸಂತ ಪೂಜಾರಿ ನಿಧನ

ಉಡುಪಿ: ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಹಾಗೂ ನಿವೃತ್ತ ಸಹಾಯಕ ಪೊಲೀಸ್ ಉಪನಿರೀಕ್ಷಕ (ಎಎಸ್ಐ) ವಸಂತ ಪೂಜಾರಿ ದೊಡ್ಡಣ್ಣಗುಡ್ಡೆ (73) ಅವರು ಅಲ್ಪಕಾಲದ ಅಸ್ವಸ್ಥತೆಯಿಂದ ಶನಿವಾರ ಸಂಜೆ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬದವರನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯ ಸಮಯವನ್ನು ಕುಟುಂಬದವರು ತಿಳಿಸಿದ ಬಳಿಕ ಪ್ರಕಟಿಸಲಾಗುವುದು ಎಂದು ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಿಳಿಸಲಾಗಿದೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಪತ್ನಿ, ಪುತ್ರಿ ಮತ್ತು ಕುಟುಂಬದವರಿಗೆ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಪ್ರಾರ್ಥಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!