ಕಟಪಾಡಿ: ಗ್ರಾ.ಪಂ. ವ್ಯಾಪ್ತಿಯ ಅನ್ಯ ಪಕ್ಷಗಳ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಉಡುಪಿ: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿವಿಧ ಜನಪರ ಯೋಜನೆಗಳು, ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದ ಅಭಿವೃದ್ಧಿ ಪರ ಆಡಳಿತ ಹಾಗೂ ಸದೃಢ ಪಕ್ಷ ಸಂಘಟನೆಯಿಂದ ಇಂದು ಬಿಜೆಪಿ ಸರ್ವಸ್ಪರ್ಶಿ ಸರ್ವವ್ಯಾಪಿ ಎನಿಸಿದೆ. ಇದರ ಪರಿಣಾಮವಾಗಿ ಯುವ ಜನತೆಯ ಒಲವು ಬಿಜೆಪಿಯತ್ತ ಕೇಂದ್ರೀಕೃತವಾಗಿದೆ. ಪ್ರಸಕ್ತ ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಗರಿಷ್ಠ ಅಂತರದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಬಿಜೆಪಿ ಕಾಪು ಮಂಡಲ ಕಛೇರಿಯಲ್ಲಿ ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅನ್ಯ ಪಕ್ಷಗಳ ಕಾರ್ಯಕರ್ತರ ಬಿಜೆಪಿ ಸೇರ್ಪಡೆಗೆ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಕಾಪು ಪುರಸಭೆ ಅಧ್ಯಕ್ಷ ಅನಿಲ್ ಪೂಜಾರಿ, ಬಿಜೆಪಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ರಾಜೇಶ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!