ಕಟಪಾಡಿ: ರಾಜ್ಯದ ಪ್ರಪ್ರಥಮ ಸಂಪೂರ್ಣ ಅಮೃತ ಶಿಲಾಮಯ ಅಯ್ಯಪ್ಪ ಸ್ವಾಮಿ ದೇಗುಲ ನಿರ್ಮಾಣಕ್ಕೆ ಚಾಲನೆ

ಅ.15ರಂದು ರಾಜಸ್ಥಾನದಿಂದ ಆಗಮಿಸಲಿರುವ ಪ್ರಥಮ ಹಂತದ ಅಮೃತಶಿಲೆಗೆ ಭವ್ಯ ಸ್ವಾಗತ

ಉಡುಪಿ: ಉಡುಪಿ ಜಿಲ್ಲೆಯ ಕಟಪಾಡಿಯ ಪಂಪಾಕ್ಷೇತ್ರ, ರಿಷಾಲ್ ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕರ್ನಾಟಕದ ಪ್ರಪ್ರಥಮ ಸಂಪೂರ್ಣ ಅಮೃತಶಿಲಾಮಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ನಿರ್ಮಾಣ ಕಾರ್ಯಕ್ಕೆ ರಾಜಸ್ಥಾನದಿಂದ ಪ್ರಥಮ ಹಂತದ ಅಮೃತಶಿಲೆ ಆಗಮಿಸಲಿದೆ.
ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ವತಿಯಿಂದ ನಿರ್ಮಿಸಲಾಗುತ್ತಿರುವ ದೇವಸ್ಥಾನಕ್ಕೆ ಅಮೃತಶಿಲೆ ಹೊತ್ತು ತರುವ ವಾಹನವನ್ನು ಅ. 15ರಂದು ಗುರುವಾರ ಸಂಜೆ 4 ಗಂಟೆಗೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್‌ನಲ್ಲಿ ಭಕ್ತಿಪೂರ್ವಕವಾಗಿ ಸ್ವಾಗತಿಸಲಾಗುವುದು.
ಈ ಸ್ವಾಗತ ಕಾರ್ಯಕ್ರಮದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!