ದ.ಕ: ಅ.22(ನಾಳೆ)ರಂದು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ
ಮಂಗಳೂರು, ಅ.21: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೆ ಅ.22ರ ಗುರುವಾರ ರಜೆ ಎಂದು ಶೀಘ್ರವೇ ಘೋಷಣೆಯಾಗಲಿದೆ.
ನವರಾತ್ರಿ ಉತ್ಸವದ ಕೊನೆಯ ದಿನದಂದು (ಅ.21) ತಡರಾತ್ರಿಯವರೆಗೆ ಕಾರ್ಯಕ್ರಮವಿರುವ ಕಾರಣ ವಿದ್ಯಾರ್ಥಿಗಳಿಗೆ ಮರುದಿನ (ಅ.22) ಶಾಲೆಗಳಿಗೆ ತೆರಳಲು ಸಮಸ್ಯೆಯಾಗಲಿದೆ. ಹಾಗಾಗಿ ಈ ಬಗ್ಗೆ ಪರಿಶೀಲಿಸಬೇಕು ಎಂದು ಸಾರ್ವಜನಿಕರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ರ ಗಮನ ಸೆಳೆದಿದ್ದರು.
ಆ ಹಿನ್ನೆಲೆಯಲ್ಲಿ ಈ ಬಗ್ಗೆ ಕ್ರಮ ಜರಗಿಸುವಂತೆ ಸಚಿವ ಖಾದರ್ ದ.ಕ.ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದರು. ಅದರಂತೆ ಅ.22ರ ಗುರುವಾರ ಜಿಲ್ಲೆಯ ಎಲ್ಲಾ ಖಾಸಗಿ ಮತ್ತು ಸರಕಾರಿ ಶಾಲೆಗಳಿಗೆ ರಜೆ ಘೋಷಿಸಲು ಜಿಲ್ಲಾಧಿಕಾರಿ ನಿರ್ಧರಿಸುವುದಾಗಿ ಮೂಲಗಳು ತಿಳಿಸಿವೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಶೀಘ್ರವೇ ಹೊರಬೀಳಲಿದೆ.
ದಸರಾ ರಜೆ ವಿಸ್ತರಣೆ: ಶಾಲೆಗಳಿಗೆ ಅ.22 ರಂದು ರಜೆ
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (1 ರಿಂದ 10ನೇ ತರಗತಿ ವರೆಗೆ ) ದಸರಾ ರಜೆ ವಿಸ್ತರಿಸಲಾಗಿದೆ, ಅಕ್ಟೋಬರ್ 22 ರಂದು ರಜೆ ಘೋಷಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಅದೇಶಿಸಿದ್ದಾರೆ.





