ಪೊಲೀಸ್ ದೌರ್ಜನ್ಯಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ ಪ್ರಕರಣ- ಸುರತ್ಕಲ್ ಠಾಣೆಗೆ ಮುತ್ತಿಗೆಗೆ ಯತ್ನ

ಸುರತ್ಕಲ್: ಇಲ್ಲಿನ ಹೊಸಬೆಟ್ಟು ನಿವಾಸಿ ಸೋಮನಾಥ ಎಂಬವರು ಪೊಲೀಸ್ ದೌರ್ಜನ್ಯಕ್ಕರ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಹೊಸಬೆಟ್ಟು ನಾಗರೀಕರು ಸೋಮವಾರ ಸಂಜೆ ರಾಷ್ಟ್ರೀಯ ಹೆದ್ದಾರಿ‌ಯನ್ನು ತಡೆದು ಸುರತ್ಕಲ್ ಪೊಲೀಸ್‌ ಠಾಣೆಗೆ ಮುತ್ತಿಗೆಗೆ ಯತ್ನಿಸಿದ ಘಟನೆ ವರದಿಯಾಗಿದೆ.

ದೆಹಲಿ ಮೂಲದ ಜೋಡಿಯೊಂದು ಹೊಸಬೆಟ್ಟು ಕಡಲ ಕಿನಾರೆಯಲ್ಲಿದ್ದ ಸಂದರ್ಭ ಮೃತ ಸೋಮನಾಥ ಮತ್ತಿತರರು ಅವರಲ್ಲಿಗೆ ಹೋಗಿ ಬೈದಿದ್ದರು ಎನ್ನಲಾಗಿದೆ.

ಇದೇ ವಿಚಾರವಾಗಿ ಜೋಡಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎನ್ನಲಾಗಿದ್ದು, ಈ ವಿಚಾರವಾಗಿ ಪೊಲೀಸರು ಸೋಮನಾಥ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿ ಠಾಣೆಯಲ್ಲಿ ಕೂರಿಸಿದ್ದರು ಎಂದು ತಿಳಿದುಬಂದಿದೆ.

ಇದೇ ವಿಚಾರವಾಗಿ‌ ಮನನೊಂದು ಸೋಮನಾಥ ಅವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಅವರು ಬರೆದಿದ್ದರೆನ್ನಲಾದ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ, “ ನನ್ನ ಸಾವಿಗೆ ನಾನೇ ಕಾರಣ. ನಾನು ಮಾಡಿದ ತಪ್ಪಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇ‌ನೆ. ಇದಕ್ಕೆ ನಾನೇ ಕಾರಣ” ಎಂದು ಬರೆಯಲಾಗಿತ್ತು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!