ಪ್ರವಾಸಿಗರಿಗೆ ಗಾಂಜಾ ಮಾರಾಟ- ಬೆಳಪು ಮತ್ತು ಕೆಮ್ಮಣ್ಣಿನ ಆರೋಪಿಗಳ ಬಂಧನ
ಉಡುಪಿ: ಕಾಪು ಉಳಿಯಾರಗೋಳಿ ಯಾರ್ಡ್ ಬೀಚ್‌ನಲ್ಲಿ ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿದ್ದಾರೆಬಂಧಿತರಿಂದ ₹2.85 ಲಕ್ಷ ಮೌಲ್ಯದ 5.710 ಕೆ.ಜಿ. ಗಾಂಜಾ ಸೇರಿದಂತೆ ನಗದು ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಬೆಳಪು ಗ್ರಾಮದ ವಿನಯನಗರದ ಬದ್ರಿಯಾ ಮಸೀದಿ ಬಳಿಯ ನಿವಾಸಿ ಆರೀಫ್ (38) ಹಾಗೂ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆಯ ಕೆಮ್ಮಣ್ಣು ಜಾಮೀಯ ಮಸೀದಿ ಬಳಿಯ ನಿವಾಸಿ ಅಕೀಫ್ (34) ಎಂದು ಗುರುತಿಸಲಾಗಿದೆ. ಟ್ರಾವೆಲ್ಗೈಡ್ ನೋಡಿ
ಅ. 27ರಂದು ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಕಾಪು ಮತ್ತು ಮಟ್ಟು ಬೀಚ್‌ಗಳಿಗೆ ಆಗಮಿಸುವ ಪ್ರವಾಸಿಗರನ್ನು ಗುರಿಯಾಗಿಸಿ ಕೊಂಡು ಇಬ್ಬರು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪಿಎಸ್‌ಐ ತೇಜಸ್ವಿ ನೇತೃತ್ವದ ಪೊಲೀಸ್ ತಂಡ ಮಧ್ಯಾಹ್ನ 12.05ರ ಸುಮಾರಿಗೆ ಉಳಿಯಾರಗೋಳಿ ಯಾರ್ಡ್ ಬೀಚ್‌ನಲ್ಲಿ ದಾಳಿ ನಡೆಸಿತು.
ಈ ಸಂದರ್ಭದಲ್ಲಿ ಆರೋಪಿಗಳು ಸ್ವಂತ ಲಾಭಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾ ಹೊಂದಿರುವುದು ಪತ್ತೆಯಾಗಿದೆ. ಪೊಲೀಸರು 5.710 ಕೆ.ಜಿ. ಗಾಂಜಾ, ₹225 ನಗದು ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿ ಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಆಂಧ್ರಪ್ರದೇಶದ ಹೈದರಾಬಾದ್‌ನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದುದಾಗಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಅಲ್ಲದೆ, ಆರೋಪಿಗಳ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದ್ದಾರೆ.





