ನ.6:ಕೋಟದಲ್ಲಿ ಪಂಚವರ್ಣ ಸದ್ಭಾವನಾ ಕನ್ನಡ ರಾಜ್ಯೋತ್ಸವ ಸಂಭ್ರಮ
Oplus_131072
ನಾಡೋಜ ಡಾ.ಜಿ.ಶಂಕರ್ ರವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ಪ್ರದಾನ
ಕೋಟ: ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ಆಶ್ರಯದಲ್ಲಿ 29 ನೇ ವರ್ಷದ ಕನ್ನಡ ರಾಜ್ಯೋತ್ಸವ ಸದ್ಭಾವನಾ 2026ರ ಶೀರ್ಷಿಕೆಯಡಿ ಪಂಚವರ್ಣ ರಾಜ್ಯೋತ್ಸವ ಗೌರವ ಪ್ರದಾನ ಸಮಾರಂಭ ಇದೇ ನವೆಂಬರ್ 06 ರ ಸಂಜೆ.6ಗ ಕೋಟದ ಮಾಂಗಲ್ಯ ಮಂದಿರದ ಮುಂಭಾಗ ಮಹಾಲಿಂಗೇಶ್ವರ ದೇಗುಲದ ರಥಬೀದಿಯಲ್ಲಿ ಜರಗಲಿದೆ.
ಈ ಪ್ರಯುಕ್ತ ಸಮ್ರ ಸೇವೆಗಾಗಿ ನಾಡೋಜ ಡಾ.ಜಿ ಶಂಕರ್ ರವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ನೀಡಲಿದ್ದು , ಬೆಂಗಳೂರು ಪ್ರಸಿದ್ಧ ಯುವ ಉದ್ಯಮಿ ಕಂಡ್ಲೂರು ಶ್ರೀನಿವಾಸ ಜೋಗಿ ಇವರಿಗೆ ಪಂಚವರ್ಣ ವಿಶೇಷ ಪುರಸ್ಕಾರ ,ಅಂತಾರಾಷ್ಟ್ರೀಯ ಕರಾಟೆ ಪಟು ವಿಜಯ ಪೂಜಾರಿ ವಿಶೇಷ ಅಭಿನಂದನೆ ಭಾಜನರಾಗಲಿದ್ದಾರೆ.
ಬನ್ನಾಡಿ ಪದ್ದು ಆಚಾರ್ ಸ್ಮರಣಾರ್ಥ ಆರೋಗ್ಯ ನಿಧಿ,ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್ ವಿದ್ಯಾನಿಧಿ,ಸಂತೋಷ್ ಮೇಷ್ಟ್ರ್ ಸ್ಮರಣಾರ್ಥ ಶೈಕ್ಷಣಿಕ ದತ್ತಿನಿಧಿ ಹಸ್ತಾಂತರ ಕಾರ್ಯಕ್ರಮ ಜರಗಲಿದೆ.
ಮುಖ್ಯ ಅಭ್ಯಾಗತರಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ,ಶಾಸಕ ಕಿರಣ್ ಕುಮಾರ್ ಕೊಡ್ಗಿ,ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ,ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್ ಮುಖ್ಯಸ್ಥ ಸಂಪತ್ ಕುಮಾರ್ ಶೆಟ್ಟಿ,ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ,ರಾಜ್ಯ ಕರಕುಶಲ ನಿಗಮದ ಮಾಜಿ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ,ಮುಂಬೈ ಉದ್ಯಮಿ ಬಡಾಮನೆ ರತ್ನಾಕರ ಶೆಟ್ಟಿ,ಸಾನ್ವಿ ಗ್ರೂಪ್ ಮುಖ್ಯಸ್ಥ ಅವಿನಾಶ್ ಶೆಟ್ಟಿ ಗುಂಡ್ಮಿ,ಸುಜ್ಞಾನ ಎಜುಕೇಷನ್ ಟ್ರಸ್ಟ್ ಮುಖ್ಯಸ್ಥ ರಮೇಶ್ ಶೆಟ್ಟಿ ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ.ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಕಲ್ಮಾಡಿ ಅಂಗನವಾಡಿ ,ಮಯೂರಿ ನೃತ್ಯ ತಂಡ ಕುಂಭಾಶಿ,ಹಂದಟ್ಟು ಮಹಿಳಾ ಬಳಗ,ಪಂಚವರ್ಣ ಮಹಿಳಾ ಮಂಡಲ ಇವರಿಂದ ನೃತ್ಯ ವೈವಿಧ್ಯ,ಚೈತನ್ಯ ಕಲಾವಿದರು ಬೈಲೂರು ಇವರಿಂದ ರಾಘು ಮಾಸ್ಟ್ರ್ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ





