ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷರನ್ನು ಅಭಿನಂದಿಸಿದ ಉಡುಪಿ ಜಿಲ್ಲಾ ಯುವಮೋರ್ಚಾ ತಂಡ
ಉಡುಪಿ: ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಡಾ ಹೇಮಂಗ್ ಜೋಶಿ ಅವರನ್ನು ಬಿಜೆಪಿ ಯುವಮೋರ್ಚಾ ಉಡುಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಪ್ಪ್ರಥ್ವಿರಾಜ್ ಶೆಟ್ಟಿ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಯುವಮೋರ್ಚಾ ತಂಡದ ಪರವಾಗಿ ದೆಹಲಿಯಲ್ಲಿ ಭೇಟಿ ನೀಡಿ ಶುಭ ಹಾರೈಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ರಶ್ಮೀ ಸಾಮಂತ್, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಭಿರಾಜ್ ಸುವರ್ಣ ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಗುರುರಾಜ್ ಮಾಡ, ಪ್ರಥ್ವಿರಾಜ್ ಮಣಿಪಾಲ್ ಜೊತೆಗಿದ್ದರು.





