ಪ್ರದೀಪ್‌ ಪೂಜಾರಿ ಆತ್ಮಹತ್ಯೆ ಪ್ರಕರಣ: ಆರೋಪಿಗಳಿಬ್ಬರು ವಶಕ್ಕೆ

ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರದೀಪ್‌ ಪೂಜಾರಿ ಅವರ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಆರೋಪಿಗಳ ಪತ್ತೆಗಾಗಿ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ಪತ್ತೆಹಚ್ಚಿ ವಶಕ್ಕೆ .

ಸದ್ಯ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದ್ದು, ಇಲ್ಲಿಗೆ ತಲುಪಿದ ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಕೃತವಾಗಿ ಬಂಧಿಸುವ ಸಾಧ್ಯತೆಯಿದೆ. ಬಂಧನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಆರೋಪಿಗಳ ಹೆಸರು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಬಹಿರಂಗಪಡಿಸಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!