ಉಡುಪಿ: ಯು.ದಾಮೋದರ್ ನಿಧನ

ಉಡುಪಿ: ಸಿಂಡಿಕೇಟ್ ಬ್ಯಾಂಕ್ ಪ್ರಧಾನ ಕಚೇರಿಯ ನಿವೃತ್ತ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್‌ ಇದರ ಮಾಜಿ ಸಾರ್ವಜನಿಕ ಸಂಪರ್ಕಾಧಿಕಾರಿ ಯು. ದಾಮೋದರ್ ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಗುರುವಾರ ಮುಂಜಾನೆ ಅಸುನೀಗಿದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.

ದಾಮೋದ‌ರ್ ಅವರು ಲಯನ್ಸ್ ಕ್ಲಬ್ ಉಡುಪಿಯ ಅಧ್ಯಕ್ಷರಾಗಿ, ರಂಗಭೂಮಿ ಸಹಿತ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ ಹರಿಣಿ ದಾಮೋದರ್, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು – ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರವು ಗುರುವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಉಡುಪಿ ಅಜ್ಜರಕಾಡಿನಲ್ಲಿರುವ ಅವರ ಸ್ವಗೃಹದಲ್ಲಿ ನಡೆಯಲಿದೆ ಅವರ ಕುಟುಂಬ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!