ಪ್ರದೀಪ್ ಪೂಜಾರಿ ಪ್ರಕರಣ: ಕರ್ತವ್ಯ ಲೋಪ ಎಸಗಿದ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ

ಹಿರಿಯಡ್ಕ ಪಿಎಸ್‌ಐ ಡಿಐಜಿ ಕಚೇರಿಗೆ ವರ್ಗಾವಣೆ; ಆಸ್ಪತ್ರೆ ಭದ್ರತಾ ಕರ್ತವ್ಯದಲ್ಲಿದ್ದ ಇಬ್ಬರು ಸಿಬ್ಬಂದಿ ಅಮಾನತು

ಉಡುಪಿ: ಪ್ರದೀಪ್ ಪೂಜಾರಿ ಪ್ರಕರಣದ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ನಡೆಸಿದ ವಿಚಾರಣೆಯ ವರದಿಯ ಆಧಾರದ ಮೇಲೆ ಮುಂದಿನ ಕ್ರಮಕ್ಕಾಗಿ ವರದಿಯನ್ನು ಪಶ್ಚಿಮ ವಲಯದ ಡಿಐಜಿಯವರಿಗೆ ಸಲ್ಲಿಸಲಾಗಿದೆ. ಇದರ ಬೆನ್ನಲ್ಲೇ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್‌ಐ ಪುನೀತ್ ಅವರನ್ನು ಪಶ್ಚಿಮ ವಲಯದ ಡಿಐಜಿ ಕಚೇರಿಗೆ ವರ್ಗಾವಣೆ ಮತ್ತು ಅವರ ವಿರುದ್ಧ ಶಿಸ್ತು ಕ್ರಮದ ಪ್ರಕ್ರಿಯೆ ಆರಂಭಿಸಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಮಹಿಳಾ ಠಾಣೆಯ ಹೆಡ್‌ಕಾನ್ಸ್ಟೇಬಲ್ ರಾಘವೇಂದ್ರ ಉಪ್ಪೂರು, ಕಾನ್ಸ್‌ಟೇಬಲ್ ಶಿವರಾಯ ಕರ್ತವ್ಯದ ಅವಧಿಯಲ್ಲಿ ನಿರ್ಲಕ್ಷ್ಯ ತೋರಿರುವುದು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಸಲ್ಲಿಸಿದ ವರದಿಯಲ್ಲಿ ಉಲ್ಲೇಖವಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದ್ದು, ಅವರ ವಿರುದ್ಧವೂ ಇಲಾಖಾ ಶಿಸ್ತು ಕ್ರಮ ಮುಂದುವರಿಯಲಿದೆ.

ಪ್ರಕರಣದ ನಿರ್ವಹಣೆಯಲ್ಲಿ ಪೊಲೀಸ್ ಕರ್ತವ್ಯ ಲೋಪದ ಬಗ್ಗೆ ನಡೆದ ವಿಚಾರಣೆಯ ಬೆನ್ನಲ್ಲೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಇಲಾಖೆ ಕ್ರಮಕ್ಕೆ ಮುಂದಾಗಿದೆ.

Leave a Reply

Your email address will not be published. Required fields are marked *

error: Content is protected !!