ಕಲಾ ಪ್ರತಿಭೋತ್ಸವ-ಅಜ್ಜರಕಾಡು ಮಹಿಳಾ ಕಾಲೇಜಿಗೆ ಬಹುಮಾನ

ಉಡುಪಿ: ನ.10 (ಉಡುಪಿ ಟೈಮ್ಸ್ ವರದಿ) : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಸಹಯೋಗದಲ್ಲಿ ಆಯೋಜಿಸಲಾಗಿದ್ದ 2026–27ನೇ ಸಾಲಿನ ಜಿಲ್ಲಾ ಮಟ್ಟದ ‘ಕಲಾ ಪ್ರತಿಭೋತ್ಸವ’ದ ಚಿತ್ರಕಲಾ ಸ್ಪರ್ಧೆಯಲ್ಲಿ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಬಹುಮಾನಗಳಿಸಿದ್ದಾರೆ.

ಸ್ಪರ್ಧೆಯಲ್ಲಿ ಕಾಲೇಜಿನ ತೃತೀಯ ಬಿ.ಕಾಂ. ವಿದ್ಯಾರ್ಥಿನಿ ವೈಷ್ಣವಿ ಪ್ರಥಮ ಬಹುಮಾನ ಪಡೆದರೆ, ಪ್ರಥಮ ಎಂ.ಕಾಂ. ವಿದ್ಯಾರ್ಥಿನಿ ರಮ್ಯಾ ದ್ವಿತೀಯ ಬಹುಮಾನ ಗಳಿಸಿದ್ದಾರೆ.

ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿಕೇತನ, ಸಾಂಸ್ಕೃತಿಕ ಸಂಘದ ಸಂಚಾಲಕಿ ಆಶಾ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!