ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪ್ಪಿದ ದುರಂತ

ಮಂಗಳೂರು, ನ.17: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೈಲಟ್​ನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ ಎಂದು ತಿಳಿದು ಬಂದಿದೆ. ವಿಮಾನದಲ್ಲಿದ್ದ 236 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ಹಡಗು ಕಾಯ್ದಿರಿಸಿ

ವಿಮಾನವು ಟೇಕ್ ಆಫ್ ಆಗುವ ವೇಳೆ ಇಂಜಿನ್​ನಲ್ಲಿ ದೋಷ ಕಂಡು ಬಂದಿತ್ತು ಎನ್ನಲಾಗಿದೆ. ತಕ್ಷಣ ಎಚ್ಚೆತ್ತ ವಿಮಾನದ ಪೈಲಟ್​ ಸಮಯ ಪ್ರಜ್ಞೆ ಮೆರೆದ ಪರಿಣಾಮ ಟೇಕ್ ಆಫ್ ಆಗುವ ಕೊನೆ ಕ್ಷಣದಲ್ಲಿ ಬ್ರೇಕ್ ಹಾಕಿದ್ದು, ಭಾರೀ ಅನಾಹುತ ತಪ್ಪಿದೆ.

ಸೋಮವಾರ ಸಂಜೆ ಮಂಗಳೂರಿನಿಂದ ಇಂಡಿಗೋ ವಿಮಾನವು ಬೆಂಗಳೂರಿಗೆ ತೆರಳಲು ಸಿದ್ಧತೆ ನಡೆಸಿತ್ತು. ವಿಮಾನದಲ್ಲಿ 229 ಪ್ರಯಾಣಿಕರು ಮತ್ತು 7 ಮಂದಿ ವಿಮಾನದ ಸಿಬ್ಬಂದಿಗಳಿದ್ದರು. ರನ್ ವೇಯಲ್ಲಿ ಟೇಕ್ ಆಫ್ ಆಗುವ ವೇಳೆ ವಿಮಾನದ ಇಂಜಿನ್​ನಲ್ಲಿ ತಾಂತ್ರಿಕ ದೋಷವಿರುವುದು ಪೈಲಟ್​‌ನ ಗಮನಕ್ಕೆ ಬಂತು ಎನ್ನಲಾಗಿದೆ. ತಕ್ಷಣ ಪೈಲಟ್ ವಿಮಾನವನ್ನು ಸುರಕ್ಷಿತವಾಗಿ ನಿಯಂತ್ರಿಸುವಲ್ಲಿ ಯಶಸ್ವಿಯಾದರು ಎಂದು ತಿಳಿದುಬಂದಿದೆ. ಬಳಿಕ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿದ್ದಾರೆ. ಇಂಡಿಗೋ ಸಂಸ್ಥೆಯು ಪ್ರಯಾಣಿಕರಿಗೆ ಬೇರೆ ವಿಮಾನದ ವ್ಯವಸ್ಥೆ ಮಾಡಿದೆ.

Leave a Reply

Your email address will not be published. Required fields are marked *

error: Content is protected !!