“ಬೋಡ ಶೀರ” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿದ ಸಿಂಪಲ್ ಸ್ಟಾರ್
ಉಡುಪಿ: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಕುಟುಂಬದ ಮನೆಯಲ್ಲಿ ನಡೆದ ಷಷ್ಠಿ ಕಾರ್ಯಕ್ರಮದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಅಲೆವೂರು ಗ್ರಾಮದ ದೊಡ್ಡಮನೆ ರಕ್ಷಿತ್ ಶೆಟ್ಟಿಯ ಮೂಲ ಮನೆ. ಷಷ್ಠಿಯ ಹಿನ್ನೆಲೆಯಲ್ಲಿ ಕುಟುಂಬದ ಮನೆಯಲ್ಲಿ ಪ್ರತೀ ವರ್ಷ ನಾಗ ದೇವರಿಗೆ ವಿಶೇಷ ಪೂಜೆಯನ್ನು ನೆರವೇರಿಸಲಾಗುತ್ತದೆ. ಇವತ್ತು ಈ ಕಾರ್ಯಕ್ರಮದಲ್ಲಿ ರಕ್ಷಿತ್ ಶೆಟ್ಟಿ ಕುಟುಂಬ ಸಮೇತರಾಗಿ ಪಾಲ್ಗೊಂಡರು.
ಚಾರ್ಲಿ 777 ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ಬಾಕಿ ಇದ್ದು, ಬ್ಯುಸಿ ಶೆಡ್ಯೂಲ್ ನಡುವೆಯೇ ಕುಟುಂಬದ ಕಾರ್ಯಕ್ರಮದಲ್ಲಿ ರಕ್ಷಿತ್ ಶೆಟ್ಟಿ ಭಾಗಿಯಾದರು. ಮಕ್ಕಳ ಜೊತೆ ಫೋಟೋಗೆ ಪೋಸ್ ಕೊಟ್ಟರು.ಇದೇ ಸಂದರ್ಭದಲ್ಲಿ ಬೂಡಾ ಶೀರ ತುಳುಚಲನಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿದರು. ಚಲನಚಿತ್ರ ದ ನಿರ್ದೇಶಕ,ನಿರ್ಮಾಪಕ ದಿಕ್ಸನ್ ಜೆಡಿ, ನಟಿ ರೊಲೆಂಡ್ ಅಲಿಶಾ, ಸಹ ನಿರ್ದೇಶಕ ಅದಿತ್ಯರಾಜ್, ಕಲಾವಿದರಾದ ಶಮಿತ ಸಾಲಿಯಾನ್ ಮುಂತಾದವರು ಉಪಸ್ಥಿತರಿದ್ದರು.