ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ಮಂಜುನಾಥ ಭಂಡಾರಿ ನೇಮಕ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರನ್ನು ನೇಮಕಗೊಳಿಸಲಾಗಿದೆ.

ಕರ್ನಾಟಕದ ವಿವಿಧ ನಿಗಮ-ಮಂಡಳಿಗಳು ಹಾಗೂ ಪ್ರಮುಖ ಸರ್ಕಾರಿ ಹುದ್ದೆಗಳಿಗೆ 18 ಶಾಸಕರು ಮತ್ತು ಮುಖಂಡರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿಕೃತ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ನೇಮಕಾತಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!