ಬಿಜೆಪಿಯ ರಾಷ್ಟ್ರೀಯ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ
ನವದೆಹಲಿ: ಭಾರತೀಯ ಜನತಾ ಪಕ್ಷದ ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬೀನ್ ಶನಿವಾರ ಆದೇಶ ಹೊರಡಿಸಿದ್ದಾರೆ.
2013 ರಿಂದ 2018 ರವರೆಗೆ ಉಡುಪಿ ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೆಸ್‌ನಿಂದ ಪ್ರತಿನಿಧಿಸಿದ್ದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷದೊಂದಿಗೆ ಅಸಮಾಧಾನದಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದರು.
2022ರಲ್ಲಿ ಬಿಜೆಪಿ ಸೇರ್ಪಡೆಗೊಂಡರೂ ವಿಧಾನಸಭಾ, ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪ್ರಮೋದ್ ಮಧ್ವರಾಜ್ ಗೆ ಅವಕಾಶ ದೊರಕಿರಲಿಲ್ಲ. ಆದರೂ ಪಕ್ಷ ನಿಷ್ಠೆಯಿಂದ ವಿವಿಧ ಜವಾಬ್ದಾರಿಗಳನ್ನು ಬೇರೆಬೇರೆ ಚುನಾವಣೆಯಲ್ಲಿ ಯಶಸ್ವಿಯಾಗಿ ನಿಭಾಯಿಸಿದರು. ಇದೀಗ ಪಕ್ಷ ಪ್ರಮುಖ ಜವಾಬ್ದಾರಿಯನ್ನು ಪ್ರಮೋದ್ ಮಧ್ವರಾಜ್ ಹೆಗಲಿಗೆ ನೀಡಿದೆ.





