ಮನೆ ಮಾಲಿಕನ್ನು ಕಟ್ಟಿ ಹಾಕಿ ದರೋಡೆ: ಮಹಿಳೆ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿ
ಸೌತಡ್ಕ: ಮನೆ ಮಾಲಿಕನನ್ನು ಕಟ್ಟಿ ಹಾಕಿ ತಂಡವೊಂದು ಲಕ್ಷಾಂತರ ರೂಪಾಯಿ ನಗ ನಗದು ದೋಚಿ ದರೋಡೆ ನಡೆಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಸೌತಡ್ಕ ಮಹಾಗಣಪತಿ ದೇವಾಲಯದ ಸಮೀಪ ನಡೆದಿದೆ. ವಿಶ್ವ ಹಿಂದೂ ಪರಿಷತ್ ನ ಕೊಕ್ಕಡ ವಲಯ ಅಧ್ಯಕ್ಷ ತುಕ್ರಪ್ಪ ಶೆಟ್ಟಿ ಎಂಬವರ ಮನೆಯಲ್ಲಿ ಈ ದರೋಡೆ ನಡೆದಿದೆ.
ಮನೆಗೆ ನುಗ್ಗಿದ ೯ ಮಂದಿ ದರೋಡೆ ಕೋರರ ತಂಡ ಮನೆ ಮಾಲಿಕನನ್ನು ಕಟ್ಟಿ ಹಾಕಿ ದರೋಡೆ ನಡೆಸಿದೆ. ಈ ವೇಳೆ ದರೋಡೆ ಕೋರರನ್ನು ತಡೆಯಲು ಯತ್ನಿಸಿದ ತುಕರಪ್ಪ ಶೆಟ್ಟಿ ಅವರ ಪತ್ನಿ ಗೀತಾ ಅವರ ಮೇಲೆ ಚೂರಿಯಿಂದ ದಾಳಿ ನಡೆಸಿದ್ದು ಅವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ದರೋಡೆ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.