ಡ್ರಗ್ಸ್ ದಂಧೆ: ಮತ್ತೊಬ್ಬ ಆರೋಪಿ ಸೆರೆ
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿನಯ್ ಕುಮಾರ್ ಎಂದು ಗುರುತಿಸಲಾಗಿದ್ದು, ಈತ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯಾಗಿದ್ದಾನೆ.
ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಈತನಿಗಾಗಿ ಸಿಸಿಬಿ ಪೊಲೀಸರು ಎಲ್ಲಾ ಕಡೆ ಶೋಧ ನಡೆಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನನ್ನು ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ಇತರ ಆರೋಪಿಗಳಿಗಾಗಿ ಸಿಸಿಬಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.