ಬೈಂದೂರು: ಮೀನು ಹಿಡಿಯಲು ಹೋದ ವ್ಯಕ್ತಿ ನೀರಿಗೆ ಬಿದ್ದು ಸಾವು
ಬೈಂದೂರು: ಆಕಸ್ಮಿಕವಾಗಿ ನೀರಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಗೋವಿಂದ (32) ನೀರಿನಲ್ಲಿ ಮುಳುಗಿ ಮೃತ ಪಟ್ಟವರು. ಇವರು ಡಿ. 20 ರಂದು ರಾತ್ರಿ ಎಂದಿನಂತೆ ಗಾಳ ಹಾಗೂ ಬಲೆಯನ್ನು ಹಿಡಿದುಕೊಂಡು ಮೀನು ಹಿಡಿಯಲು ಹೊಳೆಗೆ ಹೋಗಿದ್ದರು. ಡಿ.21ರ ಬೆಳಿಗ್ಗೆ ಮೀನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಬೈಂದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.