ರಾಜ್ಯದಲ್ಲಿ ‘ನೈಟ್ ಕರ್ಪ್ಯೂ’ ಜಾರಿ ಮಾಡುವುದಿಲ್ಲ: ಸಿಎಂ ಬಿ.ಎಸ್.ವೈ ಸ್ಪಷ್ಟನೆ

ಬೆಂಗಳೂರು: ಕೊರೊನಾ ರೂಪಾಂತರ ದೇಶದ ಜನರನ್ನು ಆತಂಕಕ್ಕೀಡು ಮಾಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮುಂಬೈನಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ.  ಆದ್ರೆ ರಾಜ್ಯದಲ್ಲಿ `ನೈಟ್ ಕರ್ಪ್ಯೂ’ ಜಾರಿ  ಮಾಡುವುದಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ. 

ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಬಗ್ಗೆ ಮಾತನಾಡಿದ ಅವರು, ಕೊರೋನಾ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು. ಕೊರೊನಾ ರೂಪಾಂತರ ಜನರನ್ನು ಆತಂಕಕ್ಕೀಡುಮಾಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೊಸ ವರ್ಷದಂದು ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಅವಕಾಶ ನೀಡುವುದಿಲ್ಲ. ವಿಮಾನ ನಿಲ್ದಾಣಗಳಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುವುದು. ಆದರೆ ರಾಜ್ಯದಲ್ಲಿ ಮುಂಬೈ ಮಾದರಿಯಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!