ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿ!
ಬೆಂಗಳೂರು: (ಉಡುಪಿ ಟೈಮ್ಸ್ ವರದಿ) ಬ್ರಿಟನ್ ನಲ್ಲಿ ಪತ್ತೆಯಾಗಿರುವ ಹೊಸ ಮಾದರಿಯ ಕೊರೋನಾ ವೈರಸ್ ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ತಲ್ಲಣ ಮೂಡಿಸಿದೆ. ಭಾರೀ ವೇಗದಲ್ಲಿ ಹರಡುವ ಹೊಸ ಮಾದರಿಯ ಕೊರೋನಾ ವೈರಸ್ ಬ್ರಿಟನ್ ನಲ್ಲಿ ಪತ್ತೆಯಾದ ಬಳಿಕ ಸಾವಿರಾರು ಮಂದಿ ಭಾರತಕ್ಕೆ ಆಗಮಿಸಿದ್ದು, ಅವರಿಂದ ಸಂಭಾವ್ಯ ಸೋಂಕು ಹರಡುವಿಕೆ ತಡೆಯುವ ಸಲುವಾಗಿ ಬುಧವಾರ ರಾತ್ರಿಯಿಂದಲೇ ರಾಜ್ಯದಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕೊರೋನಾ ರೂಪಾಂತರ ವೈರಸ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಘೋಷಿಸಿದ್ದಾರೆ.
ಇಂದಿನಿಂದ 9 ದಿನಗಳ ಕಾಲ ನೈಟ್ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇರಲಿದೆ. ಜನವರಿ 2ರವರೆಗೂ ರಾತ್ರಿ ಕರ್ಫ್ಯೂ ಇರುವುದರಿಂದ ಹೊಸ ವರ್ಷದ ಮಧ್ಯರಾತ್ರಿ ಆಚರಣೆಗೆ ಸಹಜವಾಗಿಯೇ ಕಡಿವಾಣ ಇರಲಿದೆ.
ರಾತ್ರಿ 9ರನಂತರ ಬಸ್ ಸಂಚಾರ ಇರೋದಿಲ್ಲ. ಹೋಟೆಲ್, ರೆಸ್ಟೋರೆಂಟ್ಗಳೂ ಬಂದ್ ಆಗಲಿವೆ. ವ್ಯಾಪಾರ, ವಹಿವಾಟಗಳೂ ನಡೆಯುವುದಿಲ್ಲ. ಅಗತ್ಯ ವಸ್ತುಗಳ ಸರಬರಾಜು ಮಾಡುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಇರಲಿದೆ. ಹಾಗೇ ಇಂದು ಸಂಜೆ 5ಗಂಟೆಯೊಳಗೆ ನೈಟ್ಕರ್ಫ್ಯೂ ಸಂಬಂಧಿತ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ತಿಳಿಸಿದ್ದಾರೆ.
This is bulshit what are they doing.
Yedeyurappa govt doing such a stupid think, middle night band madidre yenu prayojana illa paapa vyaparigalu hechagi saraku transportation ma do time videsha dinda bandavarannu ABSERVATION madi safe agi nodkondre spread agalla adu bittu idu ratri bandu madodrinda enu labha bar pub close madli ok curfew yake