ಇಂದಲ್ಲ, ನಾಳೆ(ಡಿ.24)ಯಿಂದ ನೈಟ್ ಕರ್ಪ್ಯೂ ಜಾರಿ, ಸಮಯ ಬದಲಾಣೆ ಗಮನಿಸಿ

ಬೆಂಗಳೂರು: ನಾಳೆಯಿಂದ ನೈಟ್ ಕರ್ಪ್ಯೂ ಜಾರಿಗೆ ಬರಲಿದೆ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ನೈಟ್ ಕರ್ಪ್ಯೂ ಸಮಯದಲ್ಲಿಯೂ ಬದಲಾವಣೆಯನ್ನ ಸರ್ಕಾರ ಮಾಡಿದೆ. ನಾಳೆ (ಡಿ.24) ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಪ್ಯೂ ಇರಲಿದೆ ಎಂದು ಸರ್ಕಾರ ಹೇಳಿದೆ.

ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಪ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00, ಗಂಟೆಯವರೆಗೆ (ಜನವರಿ 02ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ.

ರಾತ್ರಿ ಕರ್ಪ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು.

Leave a Reply

Your email address will not be published. Required fields are marked *

error: Content is protected !!