ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಂಧನ
ನವದೆಹಲಿ: ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 29ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕಾಂಗ್ರೆಸ್ ರಾಷ್ಟ್ರಪತಿ ಭವನಕ್ಕೆ ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆಯನ್ನು ತಡೆ ಹಿಡಿದಿರುವ ಪೊಲೀಸರು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಕೇಂದ್ರ ಸರಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿಯ ಗಡಿ ಭಾಗಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 29ನೇ ದಿನಕ್ಕೆ ಕಾಲಿಟ್ಟಿದೆ. ಈ ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಧ್ಯ ಪ್ರವೇಶವನ್ನು ಕೋರಿ ಕಾಂಗ್ರೆಸ್ ನಿಯೋಗವು ಗುರುವಾರ ರಾಷ್ಟ್ರ ಭವನದತ್ತ ಕಾಲ್ನಾಡಿಗೆ ಮೆರವಣಿಗೆಯನ್ನು ಹಮ್ಮಿಕೊಂಡಿತ್ತು.
ಎರಡು ಕೋಟಿ ಹಸ್ತಾಕ್ಷರವಿರುವ ಪತ್ರವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಾಂಗ್ರೆಸ್ ಪಕ್ಷವು ಸಲ್ಲಿಸಲು ನಿರ್ಧರಿಸಿತ್ತು. ಕಾಂಗ್ರೆಸ್‌ನ ಸಂಸದರು ಸೇರಿದಂತೆ ಪ್ರಮುಖ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.