‘ನಾ ಖಾವುಂಗ ನಾ ಖಾನೆ ದೂಂಗಾ’ ಎನ್ನುವುದಕ್ಕೆ ಅರ್ಥ ಸಿಗಬೇಕಾದರೆ, ಬಿಎಸ್ ವೈ ರಾಜೀನಾಮೆ ನೀಡಬೇಕು: ಸಿದ್ಧರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಕೊಡದಿದ್ದರೆ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಮಾಡುತ್ತದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಎಚ್ಚರಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಅಕ್ರಮ ಡಿನೋಟಿಫಿಕೇಶನ್ ಪ್ರಕರಣದ ರದ್ಧತಿಗೆ ಕೋರಿ ಸಿಎಂ ಯಡಿಯೂರಪ್ಪ ಅವರು, ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ನಲ್ಲಿ ವಜಾಗೊಂಡ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
ಅವರು ರಾಜಿನಾಮೆ ನೀಡಿ ಸುಪ್ರೀಂ ಕೋರ್ಟ್ ಗೆ ಹೋಗಿ ಕ್ಲೀನ್ ಚಿಟ್ ಪಡೆದ ಬಳಿಕ ಮತ್ತೆ ಮುಖ್ಯಮಂತ್ರಿ ಆಗಲಿ ಎಂದರು. ಇದೇ ವೇಳೆ ಮಾತು ಮುಂದುವರೆಸಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ “ನಾ ಖಾವುಂಗ ನಾ ಖಾನೆ ದೂಂಗಾ” ಎನ್ನುವುದಕ್ಕೆ ಅರ್ಥ ಸಿಗಬೇಕಾದರೆ, ಬಿಎಸ್ ವೈ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಪ್ರಧಾನಿ ಮೋದಿಯವರೇ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.