ಶಾಲಾರಂಭ ವಿಚಾರ ನಮಗೆ ಪ್ರತಿಷ್ಠೆಯ ವಿಚಾರವಲ್ಲ: ಸುರೇಶ್ ಕುಮಾರ್

ಬೆಂಗಳೂರು: ಶಾಲಾರಂಭ ವಿಚಾರ ನಮಗೆ ಪ್ರತಿಷ್ಠೆಯ ವಿಚಾರವಲ್ಲ, ನಮ್ಮಲ್ಲಿ ಸಮನ್ವಯತೆಯ ಕೊರತೆಯಿಲ್ಲ ಎಂದು   ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 

ಇಂದು ಮುಖ್ಯಮಂತ್ರಿಯವರ ಗೃಹ ಕಛೇರಿ ಕೃಷ್ಣಾದಲ್ಲಿ ಆರೋಗ್ಯ ಸಚಿವ ಡಾ. ಕೆ.‌ಸುಧಾಕರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಶಾಲೆಗಳನ್ನು ಆರಂಭಿಸುವುದು ನನಗಾಗಲಿ, ಸರ್ಕಾರಕ್ಕಾಗಲಿ ಪ್ರತಿಷ್ಠೆ ವಿಚಾರ ಅಲ್ಲ. ಮಕ್ಕಳ ಭವಿಷ್ಯವನ್ನು ಗಮನದಲ್ಲಿರಿಸಿ, ತಾಂತ್ರಿಕ ಸಲಹಾ ಸಮಿತಿ ಸಲಹೆಯ ಮೇರೆಗೆ ಶಾಲೆ ಆರಂಬಿಸುವ ನಿರ್ಧಾರ ಮಾಡಲಾಗಿದೆ. ಆರೋಗ್ಯ ಸಚಿವ ಡಾ. ಕೆ.‌ಸುಧಾಕರ್ ಹಾಗೂ ನನ್ನ ನಡುವೆ ಸಮನ್ವಯದ ಕೊರತೆ ಇಲ್ಲ. ಅವರು ನೀಡಿದ ತಾಂತ್ರಿಕ ಸಲಹಾ ಸಮಿತಿ ಸಲಹೆಯನ್ನು ಪರಿಗಣಿಸಿಯೇ ನಾವು ಈ ನಿರ್ಧಾರ ಕೈಗೊಂಡಿದ್ದೇವೆ ಎಂದರು.

ಇದೇ ವೇಳೆ ಮಾತು ಮುಂದುವರೆಸಿದ ಅವರು,  ಬೆಂಗಳೂರನ್ನು ಮಾತ್ರ ಕೇಂದ್ರಿತವಾಗಿ ಗಮನಿಸದೆ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯವನನ್ನೂ ಗಂಭೀರವಾಗಿ ಪರಿಗಣಿಸಲಾಗಿದೆ. ಬಾಲ ಕಾರ್ಮಿಕ, ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಚರ್ಚೆ ನಡೆಸಿ  ಕೆಲ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.    ಸಂದರ್ಭ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ವಿಶ್ವನಾಥ್ ಅವರು ಈ ಹಿಂದೆ ಶಿಕ್ಷಣ ಸಚಿವರಾಗಿದ್ದವರು. ಅವರ ಅಭಿಪ್ರಾಯಗಳಿಗೆ ಗೌರವವಿದೆ. ಈ ಬಗ್ಗೆ ಅವರೊಂದಿಗೆ ವೈಯಕ್ತಿಕವಾಗಿ ಚರ್ಚೆ ನಡೆಸುತ್ತೇವೆ ಎಂದರು.

Leave a Reply

Your email address will not be published. Required fields are marked *

error: Content is protected !!